NEWSನಮ್ಮಜಿಲ್ಲೆ

ಜುಲೈ 29 (ನಾಳೆ) ಮಂಡ್ಯ ನಗರ ಬಂದ್‌ !

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಅಣೆಕಟ್ಟಿನ 20 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ನಾಳೆ (ಜುಲೈ 29) ನಗರದಲ್ಲಿ ಬಂದ್‌ ಮಾಡುವುದಾಗಿ ಕಾವೇರಿ ಕೆಆರ್‌ಎಸ್‌ ಉಳುವಿಗಾಗಿ ಜನಾಂದೋಲನ ಸಮಿತಿ ತಿಳಿಸಿದೆ.

ಬಂದ್‌ಗೆ ರೈತಾ ಸಂಘ, ಕರುನಾಡ ಸೇವಾಕರ ಸಂಘಟನೆ, ಆಟೋ ಡ್ರೈವರ್ಸ್‌ಅಸೋಸಿಯೇಷನ್, ಜಯ ಕರ್ನಾಟಕ, ಭಾರತೀಯ ಸಂವಿಧಾನ ಹಿತರಕ್ಷಣ ವೇದಿಕೆ, ಕಬ್ಬು ಬೆಳೆಗಾರರ ​​ಸಂಘ, ಒಕ್ಕಲಿಗರ ಸೇವಾ ಟ್ರಸ್ಟ್ ಮತ್ತು ದಲಿತಾ ಸಂಘರ್ಷ ಸಮಿತಿ (ಕೃಷ್ಣಪ್ಪ) ಬೆಂಬಲ ನೀಡಿವೆ. ಈ ಬಂದ್‌ನಿಂದ ಬೆಂಗಳೂರು ಮೈಸೂರು ನಡುವಿನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಕೆಆರ್‌ಎಸ್‌ ಸುತ್ತಮುತ್ತ ಕೆಲವು ಸ್ಥಳೀಯ ರಾಜಕಾರಣಿಗಳು ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಅಣೆಕಟ್ಟಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳು ಈ ಹಿಂದೆ ಕೇಳಿ ಬಂದಿತ್ತು. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿಯ ವರದಿಯ ಜೊತೆಗೆ ಸ್ಥಳೀಯ ರೈತರ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಣೆಕಟ್ಟಿನ 20 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಕಳೆದ 2019ರ ಅಕ್ಟೋಬರ್‌ನಲ್ಲಿ ಆದೇಶ ಹೊರಡಿಸಿದ್ದರು.

ಆ  ಆದೇಶದ ಮೇರೆಗೆ ಮಂಡ್ಯ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್‌ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ, ದೊಡ್ಡಭೋಗನಹಳ್ಳಿ, ಮೊಳೆಸಂದ್ರ, ಅಲ್ಪಳ್ಳಿ, ಕಟ್ಟೇರಿ, ಕಣಿವೆಕೊಪ್ಪಲು, ಚಂದ್ರೆ ಸುತ್ತಮುತ್ತ ನಡೆಯುತ್ತಿದ್ದ ಎಲ್ಲಾ ಗಣಿಗಾರಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದರು.

ಆದರೂ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಅದನ್ನು ತಕ್ಷಣದಿಲ್ಲದೇ ನಿಲ್ಲಿಸಬೇಕು ಈ ಮೂಲಕ ಲಕ್ಷಾಂತರ ಎಕರೆಗೆ ನೀರುಣಿಸಿ ಲಕ್ಷಾಂತರ ರೈತರ ಮತ್ತು ಬೆಂಗಳೂರಿನ ಕೋಟ್ಯಂತರ ಮಂದಿಗೆ ನೀರು ಕೊಡುತ್ತಿರುವ ಡ್ಯಾಂ ಅನ್ನು ಕಾಪಾಡಬೇಕು ಎಂದು ಒತ್ತಾಯಿಸಿ ನಾಳೆ  ಬಂದ್‌ ಮಾಡಲಾಗುತ್ತಿದ್ದು ಜಿಲ್ಲೆಯ ಸಮಸ್ತ ವ್ಯಾಪಾರಿಗಳು ಸೇರಿ ನಾಗರಿಕರು ಬಂದ್‌ಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...