NEWSಕ್ರೀಡೆನಮ್ಮರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇಂದು ನಡೆದ ಕೆಎಸ್‌ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ. ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇನ್ನು ನಾನು ಕ್ರಿಕೆಟ್ ಅಭಿಮಾನಿ. ಕಾನೂನು ಚೌಕಟ್ಟಿನಲ್ಲಿ ಜನದಟ್ಟಣೆ ನಿಭಾಯಿಸಿಕೊಂಡು ಕ್ರೀಡಾಂಗಣ ಬೆಳೆಸಲಾಗುವುದು. ಇದರ ಜತೆಗೆ ಪರ್ಯಾಯವಾಗಿ ದೊಡ್ಡ ಕ್ರೀಡಾಂಗಣವನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

Megha
the authorMegha

Leave a Reply

error: Content is protected !!