NEWSನಮ್ಮರಾಜ್ಯರಾಜಕೀಯ

ಜುಲೈ 29- ರಾಜ್ಯದಲ್ಲಿ ಹೊಸದಾಗಿ 5503ಮಂದಿಯಲ್ಲಿ ಕೊರೊನಾ, 92 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5503 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  112504 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  92 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2155ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಈ ನಡುವೆ, ಇಂದು ರಾಜ್ಯದಲ್ಲಿ 2397 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 42901 ಕ್ಕೇರಿದಂತಾಗಿದೆ. 2063 ಮಂದಿ ಸಾವನ್ನಪ್ಪಿದ್ದು, 67448 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2270 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 51091 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ.

ಬಳ್ಳಾರಿಯಲ್ಲಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣ ಕನ್ನಡ 208, ಮೈಸೂರು 200, ಧಾರವಾಡ 175 ಸೇರಿ ಇಂದು ರಾಜ್ಯದಲ್ಲಿ ಒಟ್ಟು 5503 ಮಂದಿ ಹೊಸದಾಗಿ ಕೊರೊನಾ ವಿಶ್ವಮಾರಿಗೆ ಸೇರ್ಪಡೆಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು  ಇಲ್ಲಿ ಕ್ಲಿಕ್ ಮಾಡಿ  view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ನೌಕರರ ವೇತನ ವಿಷಯದಲ್ಲಿನ ನಿಮ್ಮ ಗೋಸುಂಬೆ ಆಟಗಳಿಗೆ ಯಾರು ಇಲ್ಲಿ ತಲೆ ಕೆಡಿಸಿಕೊಳ್ಳುವುದಿಲ್ಲ..!! NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ