NEWSನಮ್ಮರಾಜ್ಯರಾಜಕೀಯ

ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದಿದ್ದು ಮರೆತಿರಾ ?

ಕಾಂಗ್ರೆಸ್‌ ನಾಯಕರಿಗೆ ಒಳಜಗಳ ಹೊರಹಾಕಿದ ಮಾಜಿ ಸಿಎಂ ಕುಮಾರಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?” ಎಂದು @INCKarnataka ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿರುಗೇಡು ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ  ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್ನ ನೈತಿಕತೆ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ.

ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ ಎಂದು ತಿಳಿಸಿದ್ದಾರೆ.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ.  ಕಾಂಗ್ರೆಸ್‌ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

ಕಳೆದ ವಿಧಾನಸಭಾ  ಚುನಾವಣೆಯಲ್ಲಿ  ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್‌ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್‌ಗೆ ಸಲಹೆ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು ಎಂದು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ‌.

ಆ ನಾಯಕರು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್‌ನ  ಟ್ವಿಟರ್ ಖಾತೆಗೆ ಸೀಮಿತವೋ ಎಂದು ಪ್ರಶ್ನಿಸಿದ್ದಾರೆ.

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಶ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ನೌಕರರ ವೇತನ ವಿಷಯದಲ್ಲಿನ ನಿಮ್ಮ ಗೋಸುಂಬೆ ಆಟಗಳಿಗೆ ಯಾರು ಇಲ್ಲಿ ತಲೆ ಕೆಡಿಸಿಕೊಳ್ಳುವುದಿಲ್ಲ..!! NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ