NEWSದೇಶ-ವಿದೇಶರಾಜಕೀಯ

ಅನ್ ಲಾಕ್-3 ಮಾರ್ಗಸೂಚಿ ಪ್ರಕಟ: ಸೆಪ್ಟೆಂಬರ್‌ನಲ್ಲಿ ಶಾಲೆ-ಕಾಲೇಜು ಓಪನ್‌

ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಕೇಂದ್ರ ಸರ್ಕಾರದ ಸಮ್ಮತಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅನ್ ಲಾಕ್-3 ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬುಧವಾರ  ಬಿಡುಗಡೆ ಮಾಡಿದ್ದು, ಕಂಟೈನ್​ಮೆಂಟ್​ ಜೋನ್​ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಇದರ ಜತೆಗೆ ರಾತ್ರಿ ಕರ್ಫ್ಯೂವನ್ನು ತೆರವುಗೊಳಿಸಿದೆ.

ಥಿಯೇಟರ್ ತೆರೆಯಲು ಶಿಫಾರಸು ಮಾಡಿದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಲಹೆಯನ್ನು ಗೃಹ ಇಲಾಖೆ ಪರಿಗಣಿಸಿಲ್ಲ. ಮೂರನೇ ಹಂತದ ಅನ್​ಲಾಕ್​ನಲ್ಲೂ ಥಿಯೇಟರ್​ ಲಾಕ್​ಡೌನ್ ಮುಂದುವರಿಯಲಿದೆ ಎಂದು ತಿಳಿಸಿದೆ.

ಇನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅನುಮತಿ ನೀಡಿದ್ದು, ಮೆಟ್ರೋ, ಶಾಲಾ, ಕಾಲೇಜ್ ಗಳು, ಕೋಚಿಂಗ್ ಸೆಂಟರ್ ಗಳು ಮತ್ತು ಚಿತ್ರ ಮಂದಿರಗಳ ಮೇಲಿನ ನಿರ್ಬಂಧವನ್ನು ಆಗಸ್ಟ್ 31ರ ವರೆಗೆ ಮುಂದುವರಿಸುವುದಾಗಿ ತಿಳಿಸಿದೆ.

ಆಗಸ್ಟ್  31 ರವರೆಗೂ ಕಂಟೈನ್ ಮೆಂಟ್ ಜೋನ್ ಗಳಲ್ಲಿ ಕಠಿಣ ಲಾಕ್ ಡೌನ್ ಮುಂದುವರಿಯಲಿದ್ದು, 60 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಇರಬೇಕು. ತೀರಾ ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಬೇಕು. ಹಾಗೇ, ವಂದೇ ಭಾರತ್ ಮಿಷನ್ ಅಡಿ ಸೀಮಿತ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಇದರ ಹೊರತಾದ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶ ಇಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

Leave a Reply

error: Content is protected !!
LATEST
NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ