NEWSನಮ್ಮರಾಜ್ಯರಾಜಕೀಯಶಿಕ್ಷಣ-

ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಮಾಜಿ ಸಿಎಂ ಎಚ್‌ಡಿಕೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಶ್ರಮಿಸಿದ ಪರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ  ಆನ್ಲೈನ್ ಶಿಕ್ಷಣಕ್ಕಾಗಿ  ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮರುಗಿದ್ದಾರೆ.

ಕೊರೊನಾ ಸೋಂಕು ಜನರ ಜೀವ-ಜೀವನದ ಜತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ  ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ ಎಂದರಿವ ಅವರು, ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದು ಹೇಳಿದ್ದಾರೆ.

ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೊನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದಿದ್ದಾರೆ.

ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ