NEWSನಮ್ಮರಾಜ್ಯರಾಜಕೀಯ

ಉತ್ತರ ಕೊಡುವಾಗ ದಾರಿತಪ್ಪಿಸದೇ ಸದನದ ಗೌರವ ಎತ್ತಿಹಿಡಿಯುವ ಕೆಲಸ ಮಾಡಬೇಕು: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ವಿಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚಿಸುವ ವೇಳೆ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಪರಿಹಾರ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂಬೆಲ್ಲಾ ಸುಳ್ಳು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಇಂದು ನಡೆಯುತ್ತಿರುವ ಉತ್ತರ ಕರ್ನಾಟಕ ಭಾಗದ ವಿಷಯಗಳ ಮೇಲಿನ ಚರ್ಚೆಯ ವೇಳೆ ಮುಖ್ಯಮಂತ್ರಿ ಮಾತನಾಡಿ, ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ನಷ್ಟ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೊಟ್ಟರೂ ಕೂಡ ಅವರಿಂದ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. ನಾವು ₹2,245 ಕೋಟಿ ರೈತರಿಗೆ ಪರಿಹಾರ ನೀಡಿದ್ದೇವೆ ಎಂದರು.

ಇನ್ನು ವಿಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ, ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಹೇಳಿದರು.

ವಿಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಇತರರು ಮಧ್ಯೆ ಮಾತನಾಡುವುದು ಸರಿಯಲ್ಲ. ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ಸದನದ ಗೌರವ ಕಾಪಾಡುವ ಹೊಣೆ ಎಲ್ಲರದ್ದಾಗಿದೆ ಎಂದರು.

Megha
the authorMegha

Leave a Reply

error: Content is protected !!
Latest news
ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ...