NEWSಆರೋಗ್ಯನಮ್ಮರಾಜ್ಯ

ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಕೊಡಲು ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆ ಮೀಸಲಿಡಲು ರಾಜ್ಯ ಸರ್ಕಾರ ಆದೇಶಿಸಿದೆ. ಅದರಂತೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆ ಕೋವಿಡ್ ಹಾಗೂ ಶೇ.50 ಸಾಮಾನ್ಯ ರೋಗಿಗಳಿಗೆ ಮೀಸರಿಸಬೇಕೆಂಬ ಸೂಚನೆ ಇದೆ ಎಂದು ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ ಶುಕ್ರವಾರ  ಆಯೋಜಿಸಿದ್ದ  ಸಭೆ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಣ್ಣ-ಸಣ್ಣ/ಕಡಿಮೆ ಹಾಸಿಗೆಗಳಿರುವ 5 ರಿಂದ 10 ಆಸ್ಪತ್ರೆಗಳು ಒಟ್ಟಿಗೆ ಬಂದು ಉದಾಹರಣೆಗೆ 200 ಹಾಸಿಗೆಗಳಿದ್ದಲ್ಲಿ ಅದರಲ್ಲಿ ಕೆಲ ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆಗಳನ್ನು ನೀಡಿ, ಉಳಿದ ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡುವಂತೆಯೂ ಸೂಚನೆ ನೀಡಲಾಗಿದೆ ಎಂದರು.

ಪ್ರತಿಯೊಬ್ಬ ಬಡವರಿಗೂ ಹಾಸಿಗೆ ಲಭ್ಯವಾಗಬೇಕು. ಆ ದೃಷ್ಟಿಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಹಾಸಿಗೆ ಮೀಸಲಿಡದಿದ್ದರೆ ಕಠಿಣವಾದ ಕ್ರಮ ತೆಗೆದುಕೊಳ್ಳುವುದು. ಈಗಾಗಲೇ ಸೇಂಟ್ ಮಾರ್ಥಾಸ್  ಆಸ್ಪತ್ರೆ (ನೃಪತುಂಗ ರಸ್ತೆ), ರಂಗದೋರ್ ಮೆಮೋರಿಯಲ್ ಆಸ್ಪತ್ರೆ (ಶಂಕರಪುರಂ), ಶಿಫಾ ಆಸ್ಪತ್ರೆ(ಕ್ವೀನ್ಸ್ ರಸ್ತೆ) ಹಾಗೂ ಪೋರ್ಟಿಸ್ ಆಸ್ಪತ್ರೆ (ಕನ್ನಿಂಗ್‌ಹ್ಯಾಮ್ ರಸ್ತೆ)ಗಳಿಗೆ ವಿಪತ್ತು ನಿವರ್ಹಣಾ ಕಾಯ್ದೆ ಅಡಿ ದೂರು ದಾಖಲಿಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?