NEWSನಮ್ಮರಾಜ್ಯರಾಜಕೀಯ

ರಾಜ್ಯ ರಾಜಕೀಯ: ಸಚಿವ ಸಂಪುಟ ವಿಸ್ತರಣೆಗೆ ಡಿಸೆಂಬರ್‌ವರೆಗೆ ಬ್ರೇಕ್‌ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನು  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಡಿಸೆಂಬರ್‌ವರೆಗೆ ಮಾಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಲೇ ನೀವು ಸಂಪುಟ ವಿಸ್ತರಣೆ ಅಥವಾ ಪುರನ್‌ ರಚನೆ ಮಾಡಬೇಕು ಎಂದರೆ ವಲಸೆ ಬಂದ ಇಬ್ಬರಿಗೆ ಮಾತ್ರ ಅವಕಾಶ ಕೊಡಬೇಕು. ನೀವು ಅಂದುಕೊಂಡರೀತಿ 6 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೋದರೆ ಆಂತರಿಕ ಅಸಮಾಧಾನ ಭುಗಿಲೇಳಲಿದೆ. ಹೀಗಾಗಿ ನೀವು ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಮಾಡುವುದನ್ನು ಮುಂದೂಡಬೇಕು ಎಂದು ಪಕ್ಷದ ಹೈಕಮಾಂಡ್‌ ಕೊಟ್ಟ ಸಲಹೆ ಮೇರೆಗೆ ಡಿಸೆಂಬರ್‌ವರೆಗೆ ಮುಂದೂಡಲಾಗಿದೆ  ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು ಮೈಸೂರು ಜಿಲ್ಲೆಯ ಎಸ್‌.ಎ. ರಾಮದಾಸ್‌ ಸೇರಿ ಪಕ್ಷದ ಹಿರಿಯ ಮತ್ತು ಅನುಭವಿ ನಾಯಕರಿಗೂ ಅವಕಾಶ ಕೊಡಲು ಬಿಎಸ್‌ವೈ ಒಲವು ತೋರಿದ್ದಾರೆ. ಆದರೆ  ಈಗಿನ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಹೈಕಮಾಂಡ್‌ ಕೆಲ ಸೂಚನೆಗಳೊಂದಿಗೆ ಸಲಹೆಗಳನ್ನು ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ತಮ್ಮ ಆಪ್ತರ ಜತೆ ರಾತ್ರೋರಾತ್ರಿ ಸಭೆ ನಡೆಸಿ ಮುಂದೆ ಏನು ಮಾಡಲು ಸಾಧ್ಯ ಎಂಬ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನು ವಿಧಾನಪರಿಷತ್‌ಗೆ ನಾಮನಿರ್ದೇಶನಗೊಂಡ ಪಕ್ಷದ ಎಂಎಲ್‌ಸಿಗಳಲ್ಲಿ ಕೆಲವರಿಗೆ ಮಂತ್ರಿಸ್ಥಾನ ಕೊಡಲೇಬೇಕಿದೆ. ಅಲ್ಲದೆ ಪಕ್ಷದ ನಿಷ್ಠಾವಂತ ಶಾಸಕರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಾದ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಬಿಎಸ್‌ವೈ ಸಿಲುಕಿರುವುದರಿಂದ ಒಬ್ಬರಿಗೆ ಮಂತ್ರಿಸ್ಥಾನ ಕೊಟ್ಟು ಇನ್ನೊಬ್ಬರನ್ನು ಕೈ ಬಿಟ್ಟರೆ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಳ್ಳಲಿದೆ ಎಂಬ ಭಯದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.

ಇನ್ನು ಡಿಸೆಂಬರ್‌ವರೆಗೆ ಕಾದರೆ ಕೆಲ ಅಸಮರ್ಥ ಮಂತ್ರಿಗಳನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕಬಹುದು ಎಂಬ ಲೆಕ್ಕಚಾರವನ್ನು ಹಾಕಿಕೊಂಡು ಹೈಕಮಾಂಡ್‌  ಕಾಲವಕಾಶ ತೆಗೆದುಕೊಳ್ಳುವಂತೆ ಹೇಳಿದ್ದು, ಇದರಿಂದ ಪಕ್ಷದಲ್ಲಿ ಮುಂದೆ ಉಂಟಾಗಲಿರುವ ಅಸಮಾಧಾನವನ್ನು ಸ್ವಲ್ಪಮಟ್ಟಿಗಾದರೂ ಶಮನಗೊಳಿಸಬಹುದು ಎಂಬ  ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ ಎಂದು ಹೇಳಲಾಗುತ್ತಿದೆ.

ಈನಡುವೆ ಮೈಸೂರಿನಲ್ಲಿ ಪಕ್ಷದ ಶಾಸಕರಿದ್ದರೂ ಅವರಿಗೆ ಯಾವುದೇ ಉನ್ನತ ಸ್ಥಾನವನ್ನು ನೀಡದೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇರೆ ಜೆಲ್ಲೆಯವರಿಗೆ ವಹಿಸಿರುವುದು ಜಿಲ್ಲೆಯ ಪಕ್ಷದ ಕಾರ್ಯಕರ್ತರ ಮತ್ತು ಸ್ವತಃ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸಂಪುಟ ವಿಸ್ತರಣೆವೇಳೆ ಮೈಸೂರಿಗೆ ಹೆಚ್ಚಿನ ಆದ್ಯತೆ ನೀಡಿ ಅಲ್ಲಿನ ಶಾಸಕರನ್ನೇ ಮಂತ್ರಿಯಾಗಿ ಮಾಡುವ ಒಲವನ್ನೂ ಬಿಎಸ್‌ವೈ ತೋರಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ