NEWSಆರೋಗ್ಯಉದ್ಯೋಗನಮ್ಮರಾಜ್ಯ

ಸ್ಟ್ಯಾಪ್‌ ನರ್ಸ್‌ಗಳ ಬೇಡಿಕೆ ಈಡೇರಿಕೆಗೆ ಕ್ರಮ: ಸಚಿವ ಸುಧಾಕರ್‌ ಭರವಸೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಬೌರಿಂಗ್‌ ಆಸ್ಪತ್ರೆ ಸ್ಟ್ಯಾಪ್‌ ನರ್ಸ್‌ಗಳಿಗೆ ಭರವಸೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೌರಿಂಗ್‌ ಆಸ್ಪತ್ರೆ ಸ್ಟ್ಯಾಪ್‌ ನರ್ಸ್‌ಗಳು  ಇಂದು ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿ, ನಾವು ಕೊರೊನಾ ವಾರಿಯರ್ಸ್‌ಆಗಿ ಸೇವೆಸಲ್ಲಿಸುತ್ತಿದ್ದರೂ ನಮಗೆ ಯಾವುದೇ ಕೋವಿಡ್‌ ಸೌಲಭ್ಯವಿಲ್ಲ. ನಮಗೆ ಬೇರೆ ಯಾವುದೇ ರೀತಿಯ ಭದ್ರತೆಯನ್ನು ನೀಡಿಲ್ಲ. ಜತೆಗೆ ಮೂಲ ವೇತನವೂ ಕಡಿಮೆ ಇದೆ. ಹೀಗಾಗಿ ಬೇಸಿಕ್‌ ವೇತನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದ್ದರು.

ಅದಕ್ಕೆ ಸ್ಪಂದಿಸಿರುವ ಸಚಿವರು,  ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸುತ್ತೇನೆ. ಈ ತಕ್ಷಣವೇ ತಾವು ಕಾರ್ಯಪ್ರವೃತ್ತರಾಗಿ. ಕೊರೊನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಶ್ರೂಷಾ ಅಧಿಕಾರಿಗಳಿಗೆ ಇರುವ ಸೌಲಭ್ಯಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಶುಶ್ರೂಷಾ ಅಧಿಕಾರಿಗಳಿಗೆ ಇಲ್ಲ ಈ ಬಗ್ಗೆ  ದಯವಿಟ್ಟು ಗಮನ ಹರಿಸಿ  ನಮ್ಮ ಸಮಸ್ಯೆಗಳನ್ನು ಬೇಗನೆ ಬಗೆಹರಿಸಿ. ನಿಮಗೆ ನಾವು ಋಣಿಯಾಗಿದ್ದೇವೆ ಎಂದು ಪ್ರತಿಭಟನಾ ನಿರತರು ಮನವಿ ಮಾಡಿದ್ದಾರೆ.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಕಾಯಂ ಶುಶ್ರೂಷಕರ ಸಂಘವು NPS,KGID, RISK ALLOWANCE, JYOTI SANJEEVINI , 50% BASIC HIKE ಮತ್ತು ಕೇಂದ್ರ ವೇತನ ಜಾರಿಗೆಗೊಳಸಲು ಈ ಹಿಂದೆ ಸುಮಾರು ಮನವಿ ಪತ್ರಗಳನ್ನು ಸಲ್ಲಿಸಲಾಗಿತ್ತು ಈ ವರೆಗೂ ಯಾವುದೇ ಬೇಡಿಕೆಗಳನ್ನು ಈಡೇರಿಲ್ಲ ಎಂದು ಪ್ರತಿಭನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?