NEWSನಮ್ಮರಾಜ್ಯರಾಜಕೀಯ

ಬಿಜೆಪಿಯವರು ಕೊಟ್ಟ ನೋಟಿಸ್‌ಗೆ ಹೆದರಲ್ಲ: ಸಿದ್ದು ಗುದ್ದು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬಿಜೆಪಿ ನಾಯಕರು ನೀಡಿರುವ ನೋಟಿಸ್ ಗೆ ನಾನೇನೂ ಹೆದರುವುದಿಲ್ಲ. ನಾನೂ ಒಬ್ಬ ಲಾಯರ್‌ ತಾನೇ” ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರದ ಬಗ್ಗೆ ಕಿಡಿಕಾರಿದ್ದು, ನೋಟಿಸ್ ಬಂಡವಾಳ ಏನುಯೆಂದು ನನಗೆ ಗೊತ್ತಿಲ್ವಾ, ಆ ನೋಟಿಸ್ ‌ಗೆ ನಾನೇನು ಹೆದರಿಕೊಳ್ತಿನಾ. ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ ಎಂದರೆ ಏನ್ ಪ್ರಯೋಜನ ಎಂದು ಲೇವಡಿ ಮಾಡಿದ್ದಾರೆ.

ಡಿಕೆಶಿ ತಪ್ಪಿತಸ್ಥ ಅಂತ ತೀರ್ಮಾನ ಆಗಿದ್ಯಾ ಅದು ರಾಜಕೀಯ ದುರುದ್ದೇಶದಿಂದ ಹಾಕಿರುವ ಕೇಸ್. ಅವರಿಗೆ ಕೋರ್ಟು ಜಾಮೀನು ಕೊಟ್ಟಿದೆ. ಆ ಬಗ್ಗೆ ನಾನು ಮಾತನಾಡೋಲ್ಲ ಎಂದು ಜೈಲಿಗೆ ಹೋಗಿ ಬಂದ ಡಿಕೆಶಿ ಪಕ್ಕದಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿ, ಇವರಿಗೇನು ಬಹಳ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಹೂಬ್ಲೋಟ್ ವಾಚ್ ವಿವಾದ‌ ಮುಗಿದು ಹೋದ ಕಥೆ ಮತ್ತ್ಯಾಕೆ ಈಗ ಅದರ ಬಗ್ಗೆ ಚರ್ಚೆ.  ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ? ನಾನು ಸರ್ಕಾರಕ್ಕೆ ಆ ವಾಚ್ ವಾಪಸ್‌ ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ, ಸರ್ಕಾರದಿಂದ ಲೂಟಿ ಮಾಡಿದ ದುಡ್ಡಿನಿಂದ ವಾಚ್ ಖರೀದಿಸಿದ್ನಾ ಎಂದು ಬಿಜೆಪಿಗರಿಗೆ ತಿರುಗೇಟು ನೀಡಿದ ಅವರು, ಅದನ್ನ ಯಾರೋ ಕೊಟ್ಟಿದ್ರು, ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಇನ್ನು ಈಗ  ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುವ ಉದ್ದೇಶದಿಂದ ಈ ಬಗ್ಗೆ ಕ್ಯಾತೆ ತೆಗೆದಿದ್ದಾರೆ, ಅಷ್ಟೆ ಹೊರತು ಬೇರೇನಲ್ಲ, ಇದಕ್ಕೆ ಪುನಃ ಪ್ರತಿಕ್ರಿಯಿಸುವುದಿಲ್ಲ ಎಂದು ಹೂಬ್ಲೋಟ್ ವಾಚ್ ವಿವಾದಕ್ಕೆ ಸಂಬಂಧಿಸಿದಂತೆ  ಪ್ರಶ್ನೆಗೆ ತೆರೆಯೆಳೆದರು.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ