NEWSನಮ್ಮಜಿಲ್ಲೆನಮ್ಮರಾಜ್ಯ

ಡಿ.13 ರಂದು ಲೋಕ ಅದಾಲತ್: ನ್ಯಾಯಾಲಯಕ್ಕೆ ದಾಖಲಾದ-ಆಗದ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ಇದೇ ಡಿ.13ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ  ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ಎಸ್.ರೇಖಾ ಮಾಹಿತಿ ನೀಡಿದ್ದಾರೆ.

ಡಿ.13 ರಂದು ನಡೆಯುವ ಈ ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು  ಬೆಂಗಳೂರು ಗ್ರಾಮಾಂತರ, ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗೆ ಭರಿಸಬೇಕಾಗಿರುವ ನೀರಿನ ಕರ, ಆಸ್ತಿ ಕರ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಹಣ ವಸೂಲಾತಿ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ದಾಖಲಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು.

ಅಸಲು ಧಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪರಿಹಾರದ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಾಂಶ ಪ್ರಕರಣಗಳು, ಕಾನೂನಿನ ಅನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳು ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಹಾಗೂ ದೇವನಹಳ್ಳಿಗೆ ಆನ್ ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸಪ್, ಎಲೆಕ್ಟ್ರಾನಿಕ್ ಮೋಡ್, ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಜತೆಗೆ ನ್ಯಾಯಾಲಯಗಳಲ್ಲಿ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 13.12.2025 ರಂದು ಆಯಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿದ್ದು, ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ, ಆನ್ ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸಪ್, ಎಲೆಕ್ಟ್ರಾನಿಕ್ ಮೋಡ್, ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಮಾಡಿಕೊಂಡರೆ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಲೋಕ್ ಆದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ರೇಖಾ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ