ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಭಾನುವಾರ ಮನೆಗೆ ಮರಳಿದ್ದಾರೆ.
ಈ ಬಗ್ಗೆ ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.
ಜುಲೈ 11 ರಂದು ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ ಅಪ್ಪ ಮಗ ಇಬ್ಬರನ್ನೂ ದಾಖಲಿಸಲಾಗಿತ್ತು. ಆದರೆ ಅಭಿಷೇಕ್ ಈ ಮೊದಲೆ ಗುಣಮುಖರಾಗಿದ್ದರು.
ಇದನ್ನೂ ಓದಿರಿ ಅಮಿತಾಭ್ , ಅಭಿಷೇಕ್ ಬಚ್ಚನ್ಗೆ ಕೊರೊನಾ ಪಾಸಿಟಿವ್
ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ಮಾಡಿಸಲಾಗಿತ್ತು. ಇನ್ನು 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅಮಿತಾಭ್ ಬಚ್ಚನ್ ಜುಲೈ 11ರಂದು ಟ್ವೀಟ್ ಮಾಡಿ ತಿಳಿಸಿದ್ದರು.
???????? my father, thankfully, has tested negative on his latest Covid-19 test and has been discharged from the hospital. He will now be at home and rest. Thank you all for all your prayers and wishes for him. ????????
— Abhishek Bachchan (@juniorbachchan) August 2, 2020