NEWSನಮ್ಮರಾಜ್ಯರಾಜಕೀಯ

ಸಿಎಂ ಕಾವೇರಿ ನಿವಾಸ, ಗೃಹ ಕಚೇರಿ ಕೃಷ್ಣಾದ 11 ಸಿಬ್ಬಂದಿಗೆ ಕೊರೊನಾ: ಆಸ್ಪತ್ರೆಗೆ ಶಿಫ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಸಿಬ್ಬಂದಿಗೆ ಸೇರಿ ಒಟ್ಟು 11 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಿಎಂ ಕಾವೇರಿ ನಿವಾಸದಲ್ಲಿ ಅಡುಗೆ ಭಟ್ಟ ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೆ ಸಿಎಂ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ ಕಾರ್ ಚಾಲಕ ಸೇರಿ ಗೃಹ ಕಚೇರಿ ಕೃಷ್ಣಾದಲ್ಲಿ ಒಟ್ಟು 7 ಮಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಂಬುಲೆನ್ಸ್ ಮೂಲಕ   ಕೋವಿಡ್ ಕೇರ್ ಸೆಂಟರ್‌ ಕರೆದೊಯ್ಯಲಾಗಿದೆ.

ಎಲ್ಲ ಸಿಬ್ಬಂದಿಯನ್ನು ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ)ಗೆ ಶಿಫ್ಟ್ ಮಾಡಲಾಗುತ್ತಿದೆ. ಎಲ್ಲರಿಗೂ ಅಲ್ಲೇ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿಎಂ ಕಾವೇರಿ, ಕೃಷ್ಣದಲ್ಲಿ  ಒಟ್ಟು 50 ಜನರಿಗೆ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಲಾಗಿದ್ದು, ವರದಿ ನೆಗಿಟಿವ್ ಬಂದಿಂದ್ದು ರೋಗ ಲಕ್ಷಣ ಇದ್ದರೆ ಮತ್ತೆ ಗಂಟಲು ದ್ರವ ಪರೀಕ್ಷೆಗೆ  ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಮನೆ ಹಾಗೂ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ.

ಭಾನುವಾರ ರಾತ್ರಿಯಷ್ಟೇ ಯಡಿಯೂರಪ್ಪ ಹಾಗೂ ಅವರ ಪುತ್ರಿ ಪದ್ಮಾವತಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸದ ಸಿಬ್ಬಂದಿಗಳಲ್ಲಿಯೂ ಸೋಂಕು ಪತ್ತೆಯಾಗಿದೆ. ಹೀಗಾಗಿ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸವನ್ನು 14 ದಿನಗಳು ಸೀಲ್‌ಡೌನ್‌ ಮಾಡಲಾಗಿದೆ.

1 Comment

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ