NEWSನಮ್ಮರಾಜ್ಯ

ಸಿಎಂ ಪುತ್ರಿಗೂ ಕೊರೊನಾ ಪಾಸಿಟಿವ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮೂಲಗಳಿಂದ ಸೋಮವಾರ ತಿಳಿದುಬಂದಿದೆ.

ಭಾನುವಾರವಷ್ಟೇ ಸಿಎಂ ಅವರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಪುತ್ರಿಯಲ್ಲೂ ಕೊರೊನಾ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೊರೊನಾ ಸೋಂಕು ನಿಯಂತ್ರಣ ಕೆಲಸದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಬಿಎಸ್‌ವೈ   ನಿತ್ಯ ಸಚಿವರು, ಅನೇಕ ಅಧಿಕಾರಿಗಳು, ವೈದ್ಯರು, ಖಾಸಗಿ ಆಸ್ಪತ್ರೆಗಳು ಸೇರಿ ಹಲವು ಪ್ರಮುಖರೊಂದಿಗೆ ಸಭೆ ನಡೆಸುತ್ತಿದ್ದರು.  ಈ ಹಿನ್ನೆಲೆಯಲ್ಲಿ ಪ್ರತಿ ವಾರವೂ ಅವರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿತ್ತು. ಅದರಂತೆ ನಿನ್ನೆ ಮಾಡಿದ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಸಿಎಂ ಸದ್ಯ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಕಾವೇರಿ ನಿವಾಸದಿಂದಲೇ ಬೆಳಗ್ಗಿನ ಉಪಾಹಾರ, ಊಟ ಉಪಚಾರವನ್ನು ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?