NEWSನಮ್ಮಜಿಲ್ಲೆರಾಜಕೀಯ

ಹೊರಗುತ್ತಿಗೆ ನೌಕರರ ನೇಮಕಕ್ಕೆ ಮರು ಟೆಂಡರ್‌: ಮೇಯರ್ ತಸ್ನೀಂ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಗೆ ಮೈಸೂರು ಭಾಗದಲ್ಲಿ ಕೆಲ ನೌಕರರನ್ನು ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಚರ್ಚಿಸದೆ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಆದ್ದರಿಂದ ಅಡ್ವೈಸರಿ ಸಮಿತಿ  ಸಭೆ ಕರೆದು ಮತ್ತೊಮ್ಮೆ ಟೆಂಡರ್ ಕರೆಯುವಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ತಸ್ನೀಂ ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಸೋಮವಾರ ಜರುಗಿದ  ಸಾಮಾನ್ಯ ಕೌನ್ಸಿಲ್ ಸಭೆಯು  ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವೇಳೆ ಆಯುಕ್ತ ಗುರುದತ್ ಹೆಗಡೆ  ಪ್ರತಿಕ್ರಿಯಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು. ಕೆಲವು ದಿನಗಳ ಕಾಲ ಕೌನ್ಸಿಲ್ ನಡೆಯದ ಕಾರಣ ಅರ್ಜಿ ಆಹ್ವಾನಿಸಿ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ವಿವರಿಸಿದರು.

ನೇಮಕವಾಗಿರುವ 106 ನೌಕರರ ಪೈಕಿಯಲ್ಲಿ 47 ಮಂದಿ ಕಬಿನಿಯಲ್ಲಿ, 17 ಮಂದಿ ವಾಣಿವಿಲಾಸ ನೀರು ಸರಬರಾಜು ನಿಗಮದಲ್ಲಿ ಹಾಗೂ ಹೊಂಗಳ್ಳಿಯಲ್ಲಿ 4 ಮಂದಿ ಸೇರಿದಂತೆ 68 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳುವುದರಿಂದ ಅನೇಕ ಕೆಲಸವು ಕುಂಠಿತವಾಗುತ್ತದೆ. ಈ ಬಗ್ಗೆ ಮುಂದಿನ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮವಹಿಸಬೇಕೆಂದು ಮನವಿ ಮಾಡಿದರು.

ಯುಜಿ ಕೇಬಲ್ ಅಳವಡಿಕೆಯಲ್ಲಿ ಅವೈಜ್ಞಾನಿಕ ಪದ್ಧತಿಯನ್ನು ಅನುಸರಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಅಪಾಯವಾಗುವ ಸಾಧ್ಯತೆ ಇದೆ. ಈ ಸಂಬಂಧ ಮಹಾಪೌರರು ಕ್ರಮವಹಿಸಬೇಕೆಂದು ಮಹಾನಗರ ಪಾಲಿಕೆ ಸದಸ್ಯರು ಮನವಿ ಮಾಡಿದರು.

ಮೇಯರ್ ತಸ್ನೀಂ ಅವರು ಪ್ರತಿಕ್ರಿಯಿಸಿ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು, ಆಯುಕ್ತರು ಹಾಗೂ ವರ್ಕ್‌  ಸಮಿತಿ ಸದಸ್ಯರೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಉಪಮೇಯರ್ ಸಿ.ಶ್ರೀಧರ್, ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?