ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣ ಟ್ವೀಟರ್ನಲ್ಲಿ ವಿಷಯತಿಳಿಸಿದ್ದು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಸೋಮವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020