ಅಯೋಧ್ಯೆ: ಕೋಟ್ಯಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದಿನ ಇಂದು ಬಂದಿದೆ.
ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸಲಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಇದರೊಂದಿಗೆ ಪ್ರಧಾನಿಯವರು ಸಕಾರಗೊಳಿಸಲಿದ್ದಾರೆ. ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆ ಮಾಡಲಾಗಿದೆ.
ಇನ್ನು ಮಧ್ಯಾಹ್ನ 12.44.08 ಗಂಟೆಯಿಂದ 12.44.40 ಗಂಟೆಯ 32 ಸೆಕೆಂಡುಗಳ ಶುಭಮುಹೂರ್ತ ನಿಗದಿಯಾಗಿದ್ದು, ಇಷ್ಟು ಅವಧಿಯಲ್ಲಿಯೇ ಮೋದಿ ಬೆಳ್ಳಿ ಇಟ್ಟಿಗೆ ಇರಿಸಿ ಸಾಂಕೇತಿಕ ಭೂಮಿ ಪೂಜೆ ನೆರವೇರಿಸುವರು. ಈ ಬೆಳ್ಳಿ ಇಟ್ಟಿಗೆ ಸಾಂಕೇತಿಕವಾದ ಕಾರಣ ಬಳಿಕ, ಅದನ್ನು ಭೂಮಿಪೂಜಾ ಸ್ಥಳದಿಂದ ತೆಗೆದಿರಿಸಲಾಗುತ್ತದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಭೂಮಿಪೂಜೆ ನೆರವೇರಿದ ಬಳಿಕ ಪ್ರಧಾನಿ ನೆರೆ ಆಹ್ವಾನಿತ ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಐವರು ಮಾತ್ರ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮಕ್ಕೆ ಒಟ್ಟಾರೆ 175 ಜನರಿಗೆ ಮಾತ್ರವೇ ಆಹ್ವಾನ ನೀಡಲಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಪ್ರಧಾನಿ ದೆಹಲಿಯಿಂದ ಅಯೋಧ್ಯೆಗೆ ಆಗಮಿಸಲಿದ್ದು, ಮೊದಲು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದು ಮಧ್ಯಾಹ್ನ 12.44ರ ಮಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಿ ಬಳಿಕ ಭಾಷಣ ಮಾಡಲಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail