ನ್ಯೂಡೆಲ್ಲಿ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೇಂದ್ರ ಮಾಜಿ ಸಚಿವ ಮನೋಜ್ ಸಿನ್ಹಾ ಅವರನ್ನು ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.
ಜಿ.ಸಿ. ಮುರ್ಮು ಅವರು ಬುಧವಾರ ರಾಷ್ಟ್ರಪತಿ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಇದರಿಂದ ತೆರವಾಗಿದ್ದ ಆ ಸ್ಥಾನಕ್ಕೆ ಮನೋಜ್ ಸಿನ್ಹಾ ಅವರನ್ನು ರಾಷ್ಟ್ರಪತಿ ಗುರುವಾರ ನೇಮಕ ಮಾಡಿದ್ದಾರೆ.
ಸಿನ್ಹಾ ಅವರು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕವಾಗಿದ್ದು ಜಮ್ಮು-ಕಾಶ್ಮೀರದ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಈ ಮೂಲಕ ಕೇಂದ್ರಾಡಳಿತದ ಜನರನ್ನು ತಲುಪುವ ಗುರಿ ಹೊಂದಿದೆ. ಇನ್ನು ಮುರ್ಮು ಅವರ ಒಂಬತ್ತು ತಿಂಗಳ ಅಧಿಕಾರಾವಧಿಯಲ್ಲಿ ನಾವು ಅಂದುಕೊಂಡ ಮಟ್ಟಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿಲ್ಲ ಎಂದು ಹೇಳಿದ್ದಾರೆ.
ಸಿನ್ಹಾ ಲೋಕಸಭೆಯಲ್ಲಿ ಮೂರು ಬಾರಿ ಪೂರ್ವ ಉತ್ತರ ಪ್ರದೇಶದ ಘಾಜಿಪುರದ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರು ಸಂವಹನ ಮತ್ತು ರೈಲ್ವೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
2017 ರಲ್ಲಿ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ದಿಂದ ಟಿಕೆಟ್‌ಪಡೆದ ಗೆದ್ದ ನಂತರ, ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಕೊನೆ ಘಳಿಗೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದರು. ಸಿನ್ಹಾ ಗೋರಖ್‌ಪುರ ಎಂಪಿ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಅವರು 1999 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ಸಿನ್ಹಾ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿದ್ದರು. ಹೀಗಾಗಿ ವಿದ್ಯಾರ್ಥಿ ದಿಸೆಯಲ್ಲೇ ಅವರು ರಾಜಕೀಯ ಪ್ರವೇಶ ಮಾಡಿದ್ದಾರೆ.
ರೈಲ್ವೆ ರಾಜ್ಯ ಸಚಿವರಾಗಿ, ಪೂರ್ವ ಉತ್ತರ ಪ್ರದೇಶದ ಹಲವಾರು ನಗರಗಳನ್ನು ಸಂಪರ್ಕಿಸುವ ರೈಲು ಯೋಜನೆಗಳನ್ನು ಕೈಗೆತ್ತಿಕೊಂಡು ಅದನ್ನು ಪೂರ್ಣಗೊಳಿಸಿ ಆ ಮೂಲಕ ಸಿನ್ಹಾ ಅವರು ಒಳ್ಳೆ ಹೆಸರನ್ನು ಗಳಿಸಿದ್ದಾರೆ.