NEWSನಮ್ಮಜಿಲ್ಲೆ

ಕೊರೊನಾ ಯುಪಿಎಚ್‌ಸಿ ತಂತ್ರಾಂಶ ಬಿಡುಗಡೆ

ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ತಂತ್ರಾಂಶಕ್ಕೂ ಡಿಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಕೊರೊನಾ ಸೋಂಕು ನಿಯಂತ್ರಿಸಲು  ಕೋವಿಡ್ ಯುಪಿಎಚ್‌ ಸಿ   ಮತ್ತು ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ ಗುರುವಾರ ಬಿಡುಗಡೆ ಮಾಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದ ವಿವಿಧ ಮಾಹಿತಿಗಳಾದ  ಸಂಪರ್ಕಿತರ ಪತ್ತೆ ಹಚ್ಚುವಿಕೆ, ಕಂಟೈನ್‌ಮೆಂಟ್ ವಲಯದ ನಿರ್ವಹಣೆ, ಐ.ಎಲ್.ಐ. ಸಮೀಕ್ಷೆ, ಜ್ವರ ತಪಾಸಣಾ ಕೇಂದ್ರಗಳ ನಿರ್ವಹಣೆ, ಗಂಟಲು ದ್ರವ ಮಾದರಿ ಪರೀಕ್ಷೆ ಹಾಗೂ ಇತರೆ ಚಟುವಟಿಕೆಗಳ ನಿರ್ವಹಣೆ ವರಿದಿಯನ್ನು ಸಮಯಕ್ಕೆ ಸರಿಯಾಗಿ ಈ ತಂತ್ರಾಂಶಗಳಿಂದ ಪಡೆಯಬಹುದಾಗಿ ಎಂದು ಇದೇ ವೇಳೆ ಡಿಸಿಎಂ ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆಯಲು ಹಾಗೂ ಸಮಗ್ರವಾದ ವರದಿಯನ್ನು ಪ್ರತಿನಿತ್ಯ ಪ್ರಚಾರ ಪಡಿಸಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ(U.P.H.C) ಹಂತದಲ್ಲಿ ತಂತ್ರಾಂಶವನ್ನು ಅಳವಡಿಸಿಕೊಂಡು, ಕೋವಿಡ್-19 ಹಾಗೂ ಇನ್ನಿತರೆ ಕಾಯಿಲೆಗಳಿಗೆ ಸಂಬಂಧಿಸಿದ ವರದಿಗಳನ್ನು ತಯಾರಿಸಲು  ಯುನೈಟೆಡ್ ವೇ ಆಫ್ ಬೆಂಗಳೂರು  ವತಿಯಿಂದ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ ಎಂದು ವಿವರಿಸಿದರು.

ಇನ್ನು ಕೋವಿಡ್-19 ಧೃಡೀಕೃತ ಪ್ರಕರಣಗಳನ್ನು ಆಗಿಂದಾಗಲೇ ಆಸ್ಪತ್ರೆಗಳಿಗೆ ದಾಖಲಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್  ಮೂಲಕ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ, ಹಾಸಿಗೆಗಳನ್ನು ಕೇಂದ್ರ ಕಚೇರಿಯಲ್ಲಿ ಮತ್ತು ವಲಯ ಮಟ್ಟದಲ್ಲಿ ಸ್ಥಾಪಿಸಲಾಗಿರುವ ಜೋನಲ್ ಕಮಾಂಡ್ ಕೇಂದ್ರಗಳ ಮೂಲಕ ಹಂಚಿಕೆ ಮಾಡಿ, ರೋಗಿಗಳನ್ನು ತ್ವರಿತವಾಗಿ ಆಸ್ಪತ್ರೆಗಳಿಗೆ ದಾಖಲಿಸಲು ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು.

ಮೇಯರ್‌ ಗೌತಮ್‌ ಕುಮಾರ್‌,  ಉಪ ಮೇಯರ್‌  ರಾಮಮೋಹರಾಜು,   ಆಡಳಿತ ಪಕ್ಷದ ನಾಯಕ   ಮುನೀಂದ್ರ ಕುಮಾರ್,   ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ   ಮಂಜುನಾಥ್ ರಾಜು,  ಆಯುಕ್ತ  ಮಂಜುನಾಥ್  ಪ್ರಸಾದ್,   ವಿಶೇಷ ಆಯುಕ್ತ (ಆರೋಗ್ಯ  ಡಿ.ರಂದೀಪ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್