NEWSಆರೋಗ್ಯನಮ್ಮರಾಜ್ಯ

6 ತಿಂಗಳಿಂದ ವೇತನ ಆಗದಿರುವುದಕ್ಕೆ ಬೇಸತ್ತು ಸುಳ್ಯದ ಕೊಲ್ಲಮೊಗ್ರು ಸರ್ಕಾರಿ ಆಸ್ಪತ್ರೆ ವೈದ್ಯರ ರಾಜೀನಾಮೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ವೈದ್ಯಾಧಿಕಾರಿಗಳಿಗೆ 6ತಿಂಗಳುಗಳಿಂದಲೂ ಸರಿಯಾಗಿ ವೇತನ ಆಗದ ಕಾರಣ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ವೈದ್ಯ ಡಾ.ಕುಲದೀಪ್ ಎಂ.ಡಿ. ಅವರು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು.

ಇತ್ತ ಸರಿಯಾಗಿ ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿತ್ತಿದೆ.

ಇನ್ಬು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಳಿಗೆ ಈ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜ್ಯದ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇದೇ ರೀತಿ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ಸರ್ಕಾರ ಸಂಬಳ ಬಾಕಿ ಉಳಿಸಿಕೊಂಡಿದೆ.

ಈ ನೌಕರರ ಸಂಬಳವಿಳಂಬದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸುತ್ತಿವೆ. ಆದರೂ ಇಂಥ ಘಟನೆಗಳಿಗೆ ಸರ್ಕಾರ ಎಡೆಮಾಡಿಕೊಟ್ಟಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Megha
the authorMegha

Leave a Reply

error: Content is protected !!
Latest news
ಸರ್ಕಾರಿ ನೌಕರರ ಗೃಹಜ್ಯೋತಿಯಿಂದ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ? KKRTC ನೌಕರರ 14 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಆದೇಶ ಯಾವುದೇ ಸಮಯದಲ್ಲಾದರೂ  ಹೊರಬೀಳಬಹುದು ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್‌ ಬೃಹತ್‌ ಪಾದಯಾತ್ರೆ- ಇದು ಕೇವಲ ಭಾಷಣಕ್ಕಷ್ಟೇ ಅಲ್ಲ: ನಿಖಿಲ್ ಕುಮಾರಸ್ವಾಮಿ ಎಚ್... ನಿಂತಿರುವ ಕಾಲೇಜು ವಿದ್ಯಾರ್ಥಿ ಚುನಾವಣೆ ಇದೇ ವರ್ಷದಿಂದ ಮತ್ತೆ ಆರಂಭ: ಸಿಎಂ ಡಿಕೆಶಿ ಅಪ್ಪ ಅಂದ್ರೆ ಭಯ- ಧೈರ್ಯ ಅಪ್ಪ ಅಂದ್ರೆ ಭವಿಷ್ಯದ ಗುರು ಅಪ್ಪ ಅಂದ್ರೆ ಆಲದ ಮರ ಇದಾವುದು ಅಲ್ಲ ಪದಗಳಿಗೆ ನಿಲುಕದ ದೈವ ಗ್ರಾಚ್ಯುಟಿ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸಲ್ಲ KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ