ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಇದೇ ಆಗಸ್ಟ್ 10ರಂದು ಮಧ್ಯಾಹ್ನ 3ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ಬಳಿಕ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿ: ಶೀಘ್ರದಲ್ಲೇ ಹೊರಬೀಳಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 27 ರಿಂದ ಏಪ್ರಿಲ್ 9, 2020 ರವರೆಗೆ ನಡೆಸಲು ನಿರ್ಧರಿಸಲಾಗಿತ್ತು, ಆದರೆ ಕೊರೊನಾ ಸಂಬಂಧಿತ ಲಾಕ್‌ಡೌನ್ ಕಾರಣ ಮುಂದೂಡಲಾಯಿತು. ನಂತರ ಪರೀಕ್ಷಾ ಮಂಡಳಿಯು ಜೂನ್ 25 ರಿಂದ ಜುಲೈ 4 ರವರೆಗೆ ಪರೀಕ್ಷೆಯನ್ನು ನಡೆಸಿತು.
ಜೂನ್, ಜುಲೈನಲ್ಲಿ 10 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ 8.40 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.