ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ. ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯನ್ನು ಗುರುತಿಸಿ 2020ರ ಧಾರವಾಡ ಕೃಷಿಮೇಳದಲ್ಲಿ “ಶ್ರೇಷ್ಠ ಕೃಷಿಕ” ಹಾಗೂ ‘ಶ್ರೇಷ್ಠ ಕೃಷಿ ಮಹಿಳೆ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ತಾಲೂಕು ಮಟ್ಟದಲ್ಲಿ ಒಬ್ಬ “ಶ್ರೇಷ್ಠ ಯುವ ಕೃಷಿಕ” ಹಾಗೂ “ಶ್ರೇಷ್ಠ ಯುವ ಕೃಷಿ ಮಹಿಳೆ” (35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾತ್ರ ಅನ್ವಯ) ಯರನ್ನು ಆಯ್ಕೆ ಮಾಡಲಾಗುವುದು.
ಧಾರವಾಡ ಜಿಲ್ಲೆಯ ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಧಾರವಾಡ ಕಛೇರಿಗಳಿಂದ ಆಗಸ್ಟ್ 11 ರೊಳಗಾಗಿ ಪಡೆಯಬಹುದು. ಭರ್ತಿ ಮಾಡಿದ (ಫೋಟೊ ಸಹಿತ) ಅರ್ಜಿಯನ್ನು ಉತಾರ ಹಾಗೂ ವಯಸ್ಸಿನ ಪ್ರಮಾಣ ಪತ್ರದೊಂದಿಗೆ ತಾಲೂಕು ಮಟ್ಟದ ಕೃಷಿ ಅಧಿಕಾರಿಗಳ ಕಚೇರಿಗೆ ಆಗಸ್ಟ್ 15 ರೊಳಗಾಗಿ ಸೋಮವಾರದಿಂದ ಶುಕ್ರವಾರ ಬೆಳಗ್ಗೆ 9 ರಿಂದ ಸಾಯಂಕಾಲ 5 ಗಂಟೆಯವರೆಗೆ ಹಾಗೂ ಶನಿವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೃಷಿ ವಿಜ್ಞಾನ ಕೇಂದ್ರಕ್ಕೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಧಾರವಾಡ, ದೂರವಾಣಿ ಸಂಖ್ಯೆ 0836 – 2970246/2446470 ಸಂಪರ್ಕಿಸಬಹುದು.