NEWSಕೃಷಿನಮ್ಮಜಿಲ್ಲೆ

ಅಧಿಕಾರಿಗಳು ಸೌಜನ್ಯ ಮನೋಭಾವ ಅಳವಡಿಸಿಕೊಳ್ಳಬೇಕು: ನಿವೃತ್ತ ಐಎಎಸ್ ಅಧಿಕಾರಿ ಅಮರ್ ನಾರಾಯಣ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಅಮರ್ ನಾರಾಯಣ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ‘ಪ್ರಶಾಸನ್ ಗಾಂವ್ ಕೀ ಒರ್ 2025’ Good Governance Week ಪ್ರಸರಣ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ದಿನ ಬಹಳ ವಿಶೇಷವಾದ ದಿನ ನಮ್ಮ ರೈತರ ದಿನವನ್ನಾಗಿ ದೇಶದಾದ್ಯಂತ ಆಚರಿಸುತ್ತಿರುವ ದಿನ. ಮುಖ್ಯವಾಗಿ ರೈತರು ನಿಮ್ಮ ಕಚೇರಿಗೆ ಬಂದಾಗ ಉತ್ತಮ ಮನಸ್ಥಿತಿಯಿಂದ ಮುಗುಳ್ನಗುತ್ತಾ ಮಾತನಾಡಿಸಿ, ಏಕೆಂದರೆ ಅವರು ನಮಗೆ ಅನ್ನ ನೀಡುವ ದೇವರು. ಯಾವುದೇ ಕಾರಣಕ್ಕೂ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಅಧಿಕಾರಿಗಳಿಗೆ ಅಮರ್ ನಾರಾಯಣ ಹೇಳಿದರು.

ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ನಾವು ಸ್ಪಂದಿಸಿದರೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಿದರೆ ಅವರು ನಮಗೆ ಗೌರವವನ್ನು ನೀಡುತ್ತಾರೆ. ಎಡ್ಮಂಡ್ ಬರ್ಕ್ ಎಂಬ ವ್ಯಕ್ತಿ – ಸಮಾಜದ ಕಟ್ಟಕಡೆಯ ವ್ಯಕ್ತಿಯು ಸಹ ಸೇವೆಯಿಂದ ವಚಿಂತರಾಗದಂತೆ ನೋಡಿಕೊಳ್ಳುವುದೇ ಉತ್ತಮ ಸೇವೆ ಎಂದು ಹೇಳಿದ್ದಾರೆ. ಹಾಗಾಗಿ ನಾವುಗಳು ಉತ್ತಮ ರೀತಿಯಲ್ಲಿ ನಮ್ಮ ಕಾರ್ಯನಿರ್ವಹಿಸಿದರೆ ಜನರು ನಮ್ಮನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ನಾವು ಪ್ರಚಾರಕ್ಕಾಗಿ ಕೆಲಸ ಮಾಡುವ ಬದಲು ಉತ್ತಮ ಫಲಿತಾಂಶಕ್ಕಾಗಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ಮುಂದಾಗಿ.

ಯಾವುದಾದರು ಕಡತಗಳು ಹಾಗೇ ಉಳಿದರೆ ಅದು ನಮಗೆ ಅವಮಾನ ಸಂಗತಿಯಾಗಿದೆ. ನೊಂದವರಿಗೆ ಪರಿಹಾರ ಒದಗಿಸುವುದು ನಮ್ಮ ಕರ್ತವ್ಯ, ಸಾರ್ವಜನಿಕರು ನಮಗೆ ಸಮಸ್ಯೆ ಪತ್ರ ಕೊಟ್ಟರೇನೆ ನಾವು ಪ್ರತಿಕ್ರಿಯೆ ಮಾಡಬೇಕು ಅನ್ನುವುದು ಸಲ್ಲದು, ಮೌಖಿಕವಾಗಿ ನಿಮ್ಮ ಬಳಿ ಕೇಳಿದಾಗ ಸವಿನಯದಿಂದ ಮಾತನಾಡಿ ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಪ್ರಯುಕ್ತ ಪ್ರತಿ ವರ್ಷ ಈ ದಿನವನ್ನು Good Governess Week ಅನ್ನು ಎಂದು ಆಚರಿಸಲಾಗುತ್ತಿದೆ. ಭಾರತ ಸರ್ಕಾರದಿಂದ ಪ್ರತೀ ವರ್ಷ ಈ ವಾರವನ್ನು ಪ್ರಶಾಸನ್ ಗಾಂವ್ ಕೀ ಒರ್ 2025 ಅನ್ನು ಆಚರಿಸಲಾಗುತ್ತಿದೆ,
ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಮುಖ್ಯಮಂತ್ರಿಗಳು ನಮ್ಮ ರಾಜ್ಯದಲ್ಲಿ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಜನಸ್ಪಂದನ ಕಾರ್ಯಕ್ರಮವನ್ನು ಆರಂಭಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮಲ್ಲಿರುವ ಬಾಕಿ ಉಳಿದಿರುವ ಸಾರ್ವಜನಿಕರ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಮಾದರಿ ಅಧಿಕಾರಿ ಎಂದೆನಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವುಕುಮಾರ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಜೂ.27ರಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಆವತಿಯಿಂದ ಜ್ಯೋತಿ ರಥ ಯಾತ್ರೆ ಆರಂಭ KSRTC- BMTC ನೂತನ ಎಂಡಿಗಳ ಭೇಟಿ ಮಾಡಿದ ಕೂಟದ ಪದಾಧಿಕಾರಿಗಳು: ನೌಕರರ ಬೇಡಿಕೆ ಈಡೇರಿಕೆಗೆ ಸಭೆ ಕರೆಯಲು ಒತ್ತಾಯ ​NWKRTC ಸಂಸ್ಥೆಗೆ ಪ್ರಾಮಾಣಿಕ ಸೇವೆ ಸಲ್ಲಿಸಿ ನೂತನವಾಗಿ ನೇಮಕಗೊಂಡ ದರ್ಜೆ-2ರ ಅಧಿಕಾರಿಗಳಿಗೆ ಎಂಡಿ ಪ್ರಿಯಾಂಗಾ ಕರೆ BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ...