NEWSನಮ್ಮರಾಜ್ಯರಾಜಕೀಯ

ಕೇಳ್ಡ್ರಪ್ಪೋ ಕೇಳಿ ‘ಮನೆ ಬಾಗಿಲಿಗೆ ಮದ್ಯ’ ಸ್ವರ್ಗಕ್ಕೆ ಅಲ್ಲ….

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಖಾಸಗಿ ಕಂಪನಿ ಜತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ  ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಉಗ್ರ  ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆಯ ಸಂದೇಶವನ್ನು ರವಾಸಿದ್ದಾರೆ.

ಕೊರೊನಾ ವೈರಸ್ ನಂತರ ಎದುರಾದ ಲಾಕ್ ಡೌನ್  ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ  ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಕಿಡಿಕಾರಿದ್ದಾರೆ.

ಬೆಕ್ಕಿಗೆ ಚೆಲ್ಲಾಟ  ಇಲಿಗೆ ಪ್ರಾಣ ಸಂಕಟ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ, ಇಲ್ಲ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸಲ್ಲ. ಇಂಥ ಸಲಹೆಗಳನ್ನು ಕೊಟ್ಟ ಮುಟ್ಟಾಳರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ