ನ್ಯೂಡೆಲ್ಲಿ: ದೇಶದ ಕೃಷಿ ವಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ದೃಷ್ಟಿಯಿಂದ ಒಂದು ಲಕ್ಷ ಕೋಟಿ ರೂ. ನಿಧಿ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನಿಧಿ ಬಿಡುಗಡೆ ಮಾಡಲಿದ್ದು, ಆದೇ ರೀತಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ದೇಶದ 8.5 ಕೋಟಿ ರೈತರಿಗೆ 6 ನೇ ಕಂತಾಗಿ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ನಿನ್ನೆ ಹೇಳಿಕೆ ನೀಡಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ಕೃಷಿ ಉತ್ಪನ್ನಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಈ 1 ಲಕ್ಷ ಕೋಟಿ ರೂ. ನಿಧಿಯನ್ನು ಬಳಸಲಾಗುವುದು. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಿಸಲು ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಸಂಸ್ಕರಣಾ ಘಟಕಗಳು ಸೇರಿ ಇನ್ನಿತರ ಸೌಲಭ್ಯಕ್ಕೆ ಈ ಹಣವನ್ನು ಉಪಯೋಗಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದ್ದಾರೆ.
ಬೆಳೆಗಳನ್ನು ಸಂರಕ್ಷಿಸಲು ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವುದರಿಂದ ರೈತರ ಬೆಳೆಗಳಿಗೆ ಹೆಚ್ಚಿನ ಬೆಲೆ ಕಲ್ಪಿಸಲು ಸಾಧ್ಯವಾಗಲಿದೆ. ಅಲ್ಲದೆ ರೈತರು ತಾವು ಬೆಳೆದ ಉತ್ಪನ್ನಗಳನ್ನು ಹತಾಶೆಯ ಬೆಲೆಗಳಿಗೆ ಮಾರಾಟಮಾಡದೆ ಅವುಗಳನ್ನು ಹೆಚ್ಚಿನ ಕಾಲ ಶೀತಲ ಗೃಹಗಳಲ್ಲಿ ಸಂಗ್ರಹಿಸಿ, ಸೂಕ್ತ ಬೆಲೆ ಬಂದಾಗ ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.
ಕೃಷಿ ಮೂಲಸೌಕರ್ಯ ನಿಧಿಯಡಿ ಪ್ರಧಾನಿ ಮೋದಿ ಹಣ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೇಶದ ವಿವಿಧ ಪ್ರದೇಶಗಳ ರೈತರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
सभी देशवासियों को, विशेष रूप से किसान भाई-बहनों को बलराम जयंती की, हलछठ, और दाऊ जन्मोत्सव की शुभकामनाएं। इस खास दिन पर सुबह 11 बजे वीडियो कॉन्फ्रेंसिंग के जरिए एग्रीकल्चर इन्फ्रास्ट्रक्चर फंड के तहत एक लाख करोड़ रुपये की वित्तपोषण सुविधा की शुरुआत करूंगा।https://t.co/3q3tPWk0a4
— Narendra Modi (@narendramodi) August 9, 2020