NEWSನಮ್ಮರಾಜ್ಯ

ಮೈಸೂರು-ನಂಜನಗೂಡು ಹೆದ್ದಾರಿ ಮುಳುಗಡೆ: ಸಂಚಾರ ಬಂದ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಕಬಿನಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಪ್ರಮುಖವಾಗಿ ಮೈಸೂರು-ನಂಜನಗೂಡು ಹೆದ್ದಾರಿ  ಮುಳುಗಡೆಯಾಗಿದೆ.

ಕಬಿನಿಯಿಂದ 78,000 ಹಾಗೂ ನುಗು ಜಲಾಶಯದಿಂದ 10,206 ಕ್ಯುಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದ್ದು, ಪರಿಣಾಮ ನಂಜನಗೂಡಿನ ಸುತ್ತಮುತ್ತಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ನಂಜನಗೂಡಿನಲ್ಲಿ ಪ್ರವಾಹದಿಂದಾಗಿ 48 ಮನೆಗಳು ಜಲಾವೃತವಾಗಿದ್ದು, 130 ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 61 ಎಕರೆಯಷ್ಟು ಪ್ರದೇಶದಲ್ಲಿ ಬೆಳೆ ನಾಶವಾಗಿದೆ.

ಕಪಿಲಾ ನದಿಯ ಅಬ್ಬರ ಭಾನುವಾರ ಮತ್ತಷ್ಟು ಹೆಚ್ಚಾಗಿದ್ದು, ಮೈಸೂರು–ನಂಜನಗೂಡು ರಾಷ್ಟ್ರೀಯ ಹೆದ್ದಾರಿಗೆ ಮಲ್ಲನಮೂಲೆ ಬಳಿ ನೀರು ನುಗ್ಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಹದಿಂದಾಗಿ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲಕ್ಕೂ ಪ್ರವಾಹ ಭೀತಿ ಆವರಿಸಿದೆ.

ಇನ್ನು ಹೆದ್ದಾರಿ ಬಂದ್ ಆಗಿರುವುದರಿಂದ ಮೈಸೂರು ಮಾರುಕಟ್ಟೆಗೆ ಕೇರಳ-ತಮಿಳುನಾಡು ರಾಜ್ಯಗಳಿಂದ ಬರಬೇಕಿದ್ದ ಹತ್ತಾರು ಹಣ್ಣು-ತರಕಾರಿ ತುಂಬಿದ ಟ್ರಕ್ ಗಳ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ನಷ್ಟ ಅನುಭವಿಸುವ ಭೀತಿಯಲ್ಲಿ ರೈತರಿದ್ದಾರೆ.

ಮಲ್ಲನಮೂಲೆ ಮಠ ಜಲಾವೃತಗೊಂಡಿದ್ದರೆ, ಸುತ್ತೂರಿನಲ್ಲಿ ಶ್ರೀಮಠದವರೆಗೂ ನೀರು ಬಂದಿದೆ. ಸರಗೂರು ತಾಲೂಕಿನ ಹುಣಸಹಳ್ಳಿ ಗ್ರಾಮದ ಭಾಗ್ಯಮ್ಮ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಕಂಬ ಬಿದ್ದು ಗಾಯಗೊಂಡಿದ್ದಾರೆ.

110 ಮನೆಗಳಿಗೆ ಹಾನಿಯಾಗಿದೆ. ಹೀಗಾಗಿ ಅಧಿಕಾರಿಗಳು ಹೆದ್ದಾರಿ ಬಂದ್ ಮಾಡಿ ವಾಹನಗಳ ಮಾರ್ಗ ಬದಲಿಸಿದ್ದಾರೆ. ಮೈಸೂರಿನಿಂದ ನಂಜನಗೂಡಿಗೆ ತೆರಳಬೇಕು ಎನ್ನುವವರು ತಾಂಡವಪುರ, ಕೆಂಪೇಸಿದ್ದಯ್ಯನಹುಂಡಿ ಮಾರ್ಗವಾಗಿ ನಂಜನಗೂಡಿಗೆ ತೆರಳಬೇಕಿದೆ.ಕಟ್ಟವಾದಿಪುರದಿಂದ ಮೈಸೂರಿಗೆ ತೆರಳಲು ಅನುವು ಮಾಡಿಕೊಡಲಾಗಿದೆ.

ಇನ್ನು ಗೊಲ್ಲೂರು-ಶ್ರೀಕಂಠೇಶ್ವರ ದೇಗುಲ ಸಂಪರ್ಕಿಸುವ ಚಾಮರಾಜನಗರ ರಸ್ತೆ ಕೂಡ ಪ್ರವಾಹದಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಳೆ ಮತ್ತು ಹೆಚ್ಚಿನ ನೀರಿನ ಒಳಹರಿವಿನ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ 2,277.77ಅಡಿಗಳಿಗೆ ಏರಿಕೆಯಾಗಿದೆ. ಅಂತೆಯೇ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದಿಂದ ಶನಿವಾರ ಮಧ್ಯಾಹ್ನ 77 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗಿದೆ.

ನಂಜನಗೂಡಿಗೆ ಇದೀಗ ಎನ್ ಡಿಆರ್ ಎಫ್ ಸಿಬ್ಬಂದಿ  ಬೋಟ್ ಗಳ ಸಮೇತ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಪರಶುರಾಮ ಮತ್ತು ಆಂಜನೇಯ ದೇಗುಲಗಳ ಸ್ನಾನಘಟ್ಟದಲ್ಲಿ ಬೋಟ್ ಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ.

 

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್