ಬೆಂಗಳೂರು: ವಿಶ್ವ ಮಹಾಮಾರಿ ಕೊರೊನಾ ಇಂದು ರಾಜ್ಯದಲ್ಲಿ ಈವರೆಗೆ ಇದ್ದ ದಾಖಲೆಯನ್ನು ಮುರಿದಿದ್ದು, ಬರೋಬ್ಬರಿ 5985 ಮಂದಿಗೆ ವಕ್ಕರಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 178087 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 107 ಮಂದಿಯನ್ನು ಬಲಿಪಡೆದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3206 ಕ್ಕೆ (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈ ನಡುವೆ, ಇಂದು ರಾಜ್ಯದಲ್ಲಿ 4670 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 93908 ಕ್ಕೇರಿದಂತಾಗಿದೆ. ಇನ್ನು 80973 ಸಕ್ರಿಯ ಪ್ರಕರಣಗಳಿವೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1948 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74185ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 22 ಮಂದಿ ಬಲಿಯಾಗಿದ್ದಾರೆ.
#ಕೋವಿಡ್19Report : 09-08-2020.#CovidInKarnataka
ಒಟ್ಟು ಪ್ರಕರಣ: 178087
ಮೃತಪಟ್ಟವರು: 3198
ಗುಣಮುಖರಾದವರು: 93908
ಹೊಸ ಪ್ರಕರಣಗಳು: 5985
ಬೆಂಗಳೂರಿನಲ್ಲಿಂದು 1948 ಹೊಸ ಪ್ರಕರಣ ದೃಢ#KarnatakaFightsCorona pic.twitter.com/oUqkVoFUma— DD Chandana News (@DDChandanaNews) August 9, 2020