NEWSನಮ್ಮಜಿಲ್ಲೆರಾಜಕೀಯ

ತಲಕಾವೇರಿ ಭೂಕುಸಿತ ಪ್ರದೇಶಕ್ಕೆ ಸಚಿವದ್ವಯರ ಭೇಟಿ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್.ಅಶೋಕ್  ತಲಕಾವೇರಿ ಬಳಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಭೂಕುಸಿತ ಉಂಟಾಗಿರುವ ಬಗ್ಗೆ ಶಾಸಕ ಕೆ.ಜಿ.ಬೋಪಯ್ಯ ಅವರಿಂದ ಮಾಹಿತಿ ಪಡೆದ ಕಂದಾಯ ಸಚಿವರು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎರಡು ದಿನದೊಳಗೆ ಕಾರ್ಯಾಚರಣೆ ಮುಗಿಯಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜನರನ್ನು ನಿಯೋಜಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದರು.

ಕಾರ್ಯಾಚರಣೆಯನ್ನು ಐದು ತಂಡವಾಗಿ ಮೂರು ಪಾಳಿಯಲ್ಲಿ ನಿರ್ವಹಿಸಬೇಕು. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ ಇಲಾಖೆ, ಗೃಹರಕ್ಷಕದಳ ಹಾಗೂ ಸ್ಥಳೀಯರು ಸೇರಿದಂತೆ 150 ಕ್ಕೂ ಹೆಚ್ಚು ಜನರನ್ನು ನಿಯೋಜಿಸಿಕೊಂಡು  ತ್ವರಿತವಾಗಿ ಕಾರ್ಯಾಚರಣೆ ಕೈಗೊಳ್ಳುವಂತೆ ಲೋಕೋಪಯೋಗಿ ಮತ್ತು ಜಿ.ಪಂ.ಇಂಜಿನಿಯರ್‌ಗಳಿಗೆ  ಅಶೋಕ್  ಸ್ಪಷ್ಟ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರೂ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಪ್ರಕೃತಿ ವಿಕೋಪ ಸಂಬಂಧ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೋ ಸಂವಾದವಿದ್ದು, ರಾಜ್ಯದ ಪರಿಸ್ಥಿಯ ಬಗ್ಗೆ ಮಾಹಿತಿ ನೀಡಲಾಗುದು. ಜೊತೆಗೆ ಹೆಚ್ಚಿನ ಹಣ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಅಶೋಕ್ ತಿಳಿಸಿದರು.

ಪ್ರಕೃತಿ ವಿಕೋಪವನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ರಾಜ್ಯದ ಉತ್ತರ ಭಾಗದಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದರು.

ಸಚಿವ ವಿ.ಸೋಮಣ್ಣ   ಮಾತನಾಡಿ ಭೂಕುಸಿತ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಬೆಡ್‍ಶೀಟ್ ಸಿಕ್ಕಿದ್ದು, ದೇಹ ಸಿಗಲಿದೆ. ಕುಟುಂಬದವರಿಗೆ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದರು.

ಘಟನೆ ನಡೆದ ಸ್ಥಳ ಮತ್ತು ಆ ಸ್ಥಳದಿಂದ 65 ಅಡಿ ಕೆಳಗಿನ ಪ್ರದೇಶದಲ್ಲಿ ಎನ್‍ಡಿಆರ್‍ಎಫ್ ಮತ್ತು ಪೊಲೀಸ್ ಇಲಾಖೆಯ ತಂಡ ಶೋಧ ಕಾರ್ಯ ಮುಂದುವರೆಸಿದೆ. ಶೀಘ್ರದಲ್ಲಿಯೇ ಶೋಧ ಕಾರ್ಯ ಮುಗಿಯುವ ವಿಶ್ವಾಸವಿದೆ ಎಂದು ಹೇಳಿದರು.

ಕಾರ್ಯಾಚರಣೆಗೆ ಎಲ್ಲರೂ ಸಹಕರಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಬಡ ಜನರ ಶ್ರೇಯೋಭಿವೃದ್ಧಿಗೆ ಸ್ಪಂದಿಸುವಲ್ಲಿ ಸದಾ ಸಿದ್ಧವಿದೆ ಎಂದು ವಿ.ಸೋಮಣ್ಣ ಅವರು ಹೇಳಿದರು.

ಸಂಸದ  ಪ್ರತಾಪ್ ಸಿಂಹ ಮಾತನಾಡಿ  ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ನೇತೃತ್ವದ ಸರ್ಕಾರ ಕೃಷಿಕರು, ಕಾರ್ಮಿಕರು ಹಾಗೂ ಇತರರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಮಂದಾಗಿದೆ ಎಂದರು.

ಶಾಸಕರಾದ ಕೆ.ಜಿ ಬೋಪಯ್ಯ ಮಾತನಾಡಿ, ಭೂಕುಸಿತ ಪ್ರದೇಶ ಸಂಬಂಧಿಸಿದಂತೆ ಕಂದಾಯ ಸಚಿವರ ಗಮನಕ್ಕೆ ತಂದರು. ಶಾಸಕ ಅಪ್ಪಚ್ಚು ರಂಜನ್ ಅವರು ಕಾರ್ಯಾಚರಣೆ ಬಗ್ಗೆ ಹಲವು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೂಕುಸಿತ ಪ್ರದೇಶದಲ್ಲಿ ಕೈಗೊಳ್ಳಲಾಗಿರುವ ಕಾರ್ಯಾಚರಣೆ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ