ಬೆಂಗಳೂರು: ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಪ್ರಧಾನಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್. ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದಿದ್ದಾರೆ.
ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ, ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ50,000 ಕೋಟಿ. ಪರಿಹಾರ ಕೇಳಿದ್ದು ರೂ.35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ.
ಕಳೆದ ವರ್ಷ ಸಿಎಂ ಯಡಿಯೂರಪ್ಪ ಅವರು ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಅವರ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವರ್ಷ @CMofKarnataka ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ.
ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ.
ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು @PMOIndia ಅವರ ಗಮನಕ್ಕೆ ತರಬೇಕು.
4/10#FailedFloodMGmt— Siddaramaiah (@siddaramaiah) August 10, 2020