NEWSವಿಜ್ಞಾನ

ಕೈಗಾರಿಕೋದ್ಯಮಿಗಳ ಸಮಸ್ಯೆಗೆ  ಶೀಘ್ರ ಪರಿಹಾರ: ಸಚಿವ ಜಗದೀಶ್‌ ಶೆಟ್ಟರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌  ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲೂಕಿನ, ದಾಬಸ್‌‌ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಸೋಮವಾರ ಭೇಟಿ ನೀಡಿ  ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು.

‌ದಾಬಸ್‌ಪೇಟೆ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸಚಿವರು, ಕೈಗಾರಿಕೆಗಳಿಗೆ ಭೂಮಿಯನ್ನು ನೀಡುವುದರ ಜೊತೆಯಲ್ಲಿಯೇ ಅಗತ್ಯವಿರುವ ವಿದ್ಯುತ್‌, ನೀರು, ಸುರಕ್ಷತೆ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಮಂಡಳಿಯ ಕರ್ತವ್ಯವಾಗಿದ್ದು, ಆಗ ಮಾತ್ರ ಕೈಗಾರಿಕೆಗಳು ಸುಲಭವಾಗಿ ತಮ್ಮ ಉತ್ಪಾದನೆಯನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ರಾಜ್ಯದ ಆರ್ಥಿಕತೆಗೆ ಕೊಡುಗೆಯನ್ನು ನೀಡಲು ಸಾಧ್ಯ ಎಂದ ಸಚಿವರು ಈ ನಿಟ್ಟಿನಲ್ಲಿ ದಾಬಸ್‌ಪೇಟೆಯ ಕೈಗಾರಿಕೋದ್ಯಮಿಗಳು ನೀಡಿರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿಯ ಬೇಡಿಕೆ ಹೆಚ್ಚಿರುವುದರಿಂದ, ಮಂಡಳಿಯ ವತಿಯಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಅಭಿವೃದ್ಧಿಗೊಳಿಸಿ ಹಂಚಿಕೆಯನ್ನು ಮಾಡುವ ಕಾರ್ಯಕ್ಕೂ ವೇಗಗೊಳಿಸಬೇಕಾಗಿದೆ ಎಂದು ಹೇಳಿದರು.

ತ್ರಿವೇಣಿ ಟ್ರೀಬ್ಯೂನ್‌ ಮತ್ತು ಕೆಬಿಡಿ ಕಲ್ಪತರು ಕಂಪನಿಗಳಿಗೆ ಭೇಟಿ ನೀಡಿ ಕೋವಿಡ್‌-19 ಮಹಾಮಾರಿಯನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಿಇಒ ಡಾ.ಶಿವಶಂಕರ್‌ ಸೇರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್