CrimeNEWSನಮ್ಮಜಿಲ್ಲೆ

ಗಲಭೆ ಮಾಡಲೆಂದೇ  ಹಣ ಹಂಚಿದ್ರ ಕಿಡಿಗೇಡಿಗಳು!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ವೊಂದನ್ನು ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಮೊಹಮ್ಮದ್ ಪೈಗಂಬರ್  ಬಗ್ಗೆ ಪ್ರಕಟಿಸಲಾಗಿದೆ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ ಶಾಸಕರ ಮನೆಗೆ ಹಾನಿ ಮಾಡಲೆಂದೆ ಕೆಲವರು ದುಷ್ಕರ್ಮಿಗಳಿಗೆ ಹಣ ಹಂಚಿದ್ದಾರೆ ಎಂಬುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸಂಬಂಧ ಪೊಲೀಸರು ಸಿಸಿ ಕ್ಯಾಮರಾಗಳನ್ನು ವಶಕ್ಕೆ ಪಡೆದು ಇದರಲ್ಲಿ ಇರುವ ದೃಷ್ಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ರಾತ್ರಿ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ರಸ್ತೆಯಲ್ಲಿ ಹಾಗೂ ಠಾಣೆ ಎದುರೇ ವಾಹನಗಳು ಹೊತ್ತಿ ಉರಿದವು. ಕೈಯಲ್ಲಿ ಕಟ್ಟಿಗೆ ಹಾಗೂ ಕಲ್ಲು ಹಿಡಿದಿದ್ದ ನೂರಾರು ದುಷ್ಕರ್ಮಿಗಳು, ಪೊಲೀಸ್ ಹಾಗೂ ಸಾರ್ವಜನಿಕರ ವಾಹನಗಳ ಕಿಟಕಿ ಗಾಜುಗಳನ್ನು ಒಡೆದರು.

ಪುಲಿಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೂ ದಾಳಿ ಮಾಡಿದ್ದ ಕಿಡಿಗೇಡಿಗಳು, ವಿದ್ಯುತ್ ದೀಪ ಹಾಗೂ ಗಾಜುಗಳನ್ನು ಒಡೆದು ಹಾಕಿದರು. ಉದ್ವಿಗ್ನಗೊಂಡಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...