NEWSದೇಶ-ವಿದೇಶನಮ್ಮರಾಜ್ಯ

ನನ್ನ ತಂದೆ ಮಾಜಿ ರಾಷ್ಟ್ರಪತಿ ಬದುಕಿದ್ದಾರೆ ಸುಳ್ಳುಸುದ್ದಿ ಹಬ್ಬಿಸಬೇಡಿ: ಅಭಿಜಿತ್ ಮುಖರ್ಜಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  ನಮ್ಮ ತಂದೆ ಬದುಕಿದ್ದಾರೆ ದಯಮಾಡಿ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮನವಿ ಮಾಡಿದ್ದಾರೆ.

ಮುಖರ್ಜಿ ಅವರ  ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನೆಲೆಯಲ್ಲಿ  ಎರಡು ದಿನದ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆದರೆ, ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.  ಈಗ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ.

ಈ ಮಧ್ಯೆ ಕೆಲವು ಕಿಡಿಗೇಡಿಗಳು ಪ್ರಣಬ್ ಮುಖರ್ಜಿ ಮೃತಪಟ್ಟಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಮಟ್ಟಕ್ಕೆ ತಲುಪಿತ್ತು. ಅಲ್ಲದೆ ರಾಷ್ಟ್ರೀಯ ಚಾನೆಲ್‌ವೊಂದರಲ್ಲಿ ಈ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತ್ತು.

ಈ ಬಗ್ಗೆ ಬೇಸರಗೊಂಡಿರುವ ಪ್ರಣಬ್ ಮುಖರ್ಜಿ ಅವರ ಪುತ್ರ  ತಮ್ಮ ಟ್ವೀಟ್‌ನಲ್ಲಿ ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳು ಸುದ್ದಿಗಳು ಭಾರತದಲ್ಲಿ ಮಾಧ್ಯಮವು ಸುಳ್ಳು ಸುದ್ದಿಯ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ