NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯನವರೆ ನೀವು ಭಯೋತ್ಪಾದಕರ ಪರವೋ?

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ನೀವು ಭಯ ಹುಟ್ಟಿಸುವ ಭಯೋತ್ಪಾದಕರ ಪರವಾಗಿಯೊ? ಇಲ್ಲ ದಲಿತರ ಪರವಾಗಿಯೊ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆಗೆ ಸಂಭಂಧಪಟ್ಟಂತೆ ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್‌ನ ಓಲೈಕೆ ರಾಜಕಾರಣದಿಂದಲೇ ಈ ಜನರು ಬೆಳೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಪೊಲೀಸರು, ಪತ್ರಕರ್ತರು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಲ್ಲಿ ಈ ಕಿಡಿಗೇಡಿಗಳು ಭಯ ಸೃಷ್ಟಿಸುತ್ತಿದ್ದಾರೆ. ಭಯ ಸೃಷ್ಟಿಸುತ್ತಿರುವ ಭಯೋತ್ಪಾದಕರ ಪರವಾಗಿ ನಿಲ್ಲುತ್ತೀರೊ? ದಲಿತ, ಸಜ್ಜನ ಶಾಸಕರ ಪರವಾಗಿ ನಿಲ್ಲುತ್ತೀರೋ ಎನ್ನುವುದನ್ನು ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಬೇಕು ಎಂದರು.

ಇನ್ನು ನೀವು ಸಿಎಂ ಆಗಿದ್ದ ವೇಳೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿಲ್ಲ. ಓಲೈಕೆ ರಾಜಕೀಯ ಮಾಡಿದ್ದರಿಂದಲೇ ಬೆಂಗಳೂರಿನ ಘಟನೆ ನಡೆದಿದೆ. ಕೋಮು ಗಲಭೆ ನಡೆದ ವೇಳೆಯಲ್ಲಿ ಹತ್ತಿಕ್ಕಲು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಹಿಂದೂಗಳ ಹತ್ಯೆ ನಡೆದ ವೇಳೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಿಲ್ಲ. ಇದೆಲ್ಲವನ್ನು ಗಮನಿಸಿದರೆ ಸಿದ್ದರಾಮಯ್ಯನವರೇ ನೀವೆ ಈ ಗಲಾಟೆಗೆ ನೇರ ಕಾರಣ ಎಂದು ಹೇಳುವುದಿಲ್ಲ. ಆದರೆ ಸಿಎಂ ಆಗಿದ್ದಾಗ ಕಠಿಣ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ ಈ ಜನರಿಗೆ ಧೈರ್ಯ ಬಂದಿದೆ ಎಂದು ಹೇಳುತ್ತಿರುವುದಾಗಿ ಕಾಲೆಳೆದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...