CrimeNEWSನಮ್ಮರಾಜ್ಯರಾಜಕೀಯ

ತಪ್ಪಿತಸ್ಥರು ಜನಪ್ರತಿನಿಧಿಗಳೇ ಆಗಿದ್ದರೂ ಕ್ರಮ: ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಪ್ಪಿತಸ್ಥರು ಜನಪ್ರತಿನಿಧಿಗಳೇ ಆಗಿರಲಿ ಅಥವಾ ಯಾರೇ ಆಗಿರಲಿ ದೊಂಬಿಗೆ ಯಾರೆಲ್ಲ ಕುಮ್ಮಕ್ಕು ಕೊಟ್ಟಿದ್ದಾರೋ ಅವರ ವಿರುದ್ಧವೂ  ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆರ್‌ಟಿ ನಗರದ ನಿವಾಸದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಗಲಭೆ ಪೀಡಿತ ಪ್ರದೇಶಗಳ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸದ್ಯಕ್ಕೆ ಲಭಿಸಿರುವ ಮಾಹಿತಿ ಮತ್ತು ವಿಡಿಯೋ ಫೂಟೇಜ್ ಗಳನ್ನು ಗಮನಿಸಿದಾಗ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಹಿಂದೆ ಮುಖ್ಯವಾಗಿ ಎಸ್‌ಡಿಪಿಐ ಸಂಘಟನೆಯ ಪಾತ್ರ ಬೆಳಕಿಗೆ ಬರುತ್ತಿದೆ. ಆದರೆ, ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆಳವಾದ ತನಿಖೆ ನಡೆಸುತ್ತಿದ್ದೇವೆಂದು ಗೃ ಹೇಳಿದ್ದಾರೆ.

ಈ ಗಲಭೆಯಲ್ಲಿ ರಾಜಕಾರಣಿಗಳ ಕೈವಾಡವಿದೆಯೇ, ಸಂಘಟನೆಗಳ ಪಾತ್ರ, ಕೆಲವು ರಾಜಕೀಯ ಪಕ್ಷಗಳ ಒಳಗೆ ಮತ್ತು ಇತರ ಪಕ್ಷಗಳ ಜತೆಗೆ ಇರುವ ವೈಮನಸ್ಸು ಹೀಗೆ ಗಲಭೆಯ ಹಿಂದಿರಬಹುದಾದ ಪ್ರತಿಯೊಂದು ಕಾರಣಗಳನ್ನೂ ಕೂಲಂಕಷ ತನಿಖೆಗೆ ಒಳಪಡಿಸಲಾಗುವುದು ಎಂದರು.

ಹಲವಾರು ವರ್ಷಗಳಲ್ಲಿ ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ನಡೆದಿರುವ ಘಟನೆಗಳ ಹಿಂದಿನ ಎಸ್‌ಡಿಪಿಐನ ಪಾತ್ರದ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಈ ಮಾಹಿತಿ ಆಧಾರದಲ್ಲಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಸನ್ನದ್ಧರಾಗಿದ್ದೇವೆಂದು ಹೇಳಿದ್ದಾರೆ.

ಎಸ್ ಡಿಪಿಐ ಗೆ ಸೇರಿದ ಜನರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ನಿನ್ನೆಯಿಂದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಶಾಂತಿಯುತವಾಗಿದೆ, ಯಾವುದೇ ಅವಘಡಗಳು ನಡೆದಿಲ್ಲ. ತನಿಖೆ ಪ್ರಗತಿಯಲ್ಲಿರುವಂತೆಯೇ ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ, ಎಲ್ಲವನ್ನೂ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ, ಮುಂದಿನ ದಿನಗಳಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...