ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ಮೊನ್ನೆ ನಡೆಸಿದ ದಾಂಧಲೆ ಪ್ರಕರಣ ಸಂಬಂಧ ಬಂಧಿಸಿರುವ 150ಕ್ಕೂ ಹೆಚ್ಚು ಆರೋಪಿಗಳ ಪೈಕಿ ಅರ್ಧದಷ್ಟು ಆರೋಪಿಗಳನ್ನು ರಾತ್ರೋರಾತ್ರಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಗುರುವಾರ 80 ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಈ ಹಿನ್ನೆಲೆಯಲ್ಲಿ ಪೊಲೀಸರು ಬಳ್ಳಾರಿಗೆ ಶಿಫ್ಟ್ ಮಾಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮೂಲಗಳ ಹೇಳಿಕೆ ಪ್ರಕಾರ ಬೆಂಗಳೂರಿನ ಕಾರಾಗೃಹದಲ್ಲಿಯೇ ಇರಿಸಿದ್ದರೆ ಗಲಾಟೆ ಆಗುವ ಸಾಧ್ಯತೆಗಳಿದ್ದವು. ಹೀಗಾಗಿ ರಾತ್ರೋರಾತ್ರಿ 80 ಆರೋಪಿಗಳನ್ನು ಕೆಎಸ್ಆರ್ ಟಿಸಿ ಬಸ್ ಗಳ ಮೂಲಕ ಸಿಸಿಬಿ ಮತ್ತು ಕೆಎಸ್ಆರ್‌ಪಿ ಸಿಬ್ಬಂದಿ ಭದ್ರತೆಯಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.
ಶುಕ್ರವಾರ ಬೆಳಗ್ಗೆ ಹೊತ್ತಿಗೆ 80 ಆರೋಪಿಗಳನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರೆದೊಯ್ಯಲಾಗಿದ್ದು, ಈ ಎಲ್ಲಾ ಆರೋಪಿಗಳ ದಾಖಲೆಗಳನ್ನು ಜೈಲಾಧಿಕಾರಿಗಳು ಪರಿಶೀಲನೆ ನಡೆಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail