ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಬಹುತೇಕ ಭಾಗಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕರ್ನಾಟಕದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಅಧಿಕಗೊಳ್ಳಲಿದೆ ಎನ್ನಲಾಗಿದ್ದು, ಬೆಂಗಳೂರಿನಲ್ಲೂ ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದೆ. ಮೂರ್ನಾಲ್ಕು ದಿನಗಳಿಂದ ಬಿಡುವು ಪಡೆದಿದ್ದ ವರುಣ ಇಂದು ಮತ್ತೆ ಆರ್ಭಟಿಸುವ ಸಾಧ್ಯತೆಯಿದ್ದು, ಕರ್ನಾಟಕದಲ್ಲಿ ನಾಳೆ ಬೆಳಗ್ಗಿನವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail