ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಮೂಲ ಕಾರಣ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಮಹಮ್ಮದ್ ಪೈಗಂಬರ್ ಬಗೆಗಿನ ಅವಹೇಳನಕಾರಿ ಪೋಸ್ಟ್ ಅನ್ನು ತಾನೆ ಹಾಕಿದ್ದಾಗಿ ಆರೋಪಿ ನವೀನ್ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಅಕ್ಕನ ಮಗನಾಗಿರುವ ಆರೋಪಿ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿ ಮೂವರ ಜೀವಗಳು ಬಲಿಯಾದವು. ಶಾಸಕರ ಮನೆ ಸಂಪೂರ್ಣ ಶಿಥಿಲಗೊಂಡಿದೆ. ಅಲ್ಲದೇ ಲಕ್ಷಾಂತರ ರೂ. ಬೆಲೆಬಾಳುವ ವಾಹನಗಳು ಸೇರಿ ಮೌಲ್ಯಯುತ ವಸ್ತುಗಳು ನಾಶವಾಗಿವೆ. ದೇಶವನ್ನೇ ಬಚ್ಚಿ ಬೀಳಿಸುವ ಘಟನೆಯೂ ನಡೆದುಹೋಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈ ಮೊದಲು ಮೊಬೈಲ್ ಫೋನ್ ಕಳೆದುಹೋಗಿದೆ ಹಾಗೂ ಫೇಸ್ಬುಕ್ ಹ್ಯಾಕ್ ಆಗಿದೆ ಎಂದು ನವೀನ್ ಹೇಳಿಕೆ ನೀಡಿದ್ದ. ಇದೀಗ ತಪ್ಪೊಪ್ಪಿಕೊಂಡಿದ್ದು, ಫೇಸ್ಬುಕ್ನಲ್ಲಿ ಸ್ಟೆಟಸ್ ಹಾಕಿಕೊಂಡಿದ್ದು ನಾನೇ ಬಳಿಕ ಡಿಲೀಟ್ ಮಾಡಿದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.