CrimeNEWSನಮ್ಮರಾಜ್ಯರಾಜಕೀಯ

ಯಾರನ್ನೋ ಏಕೆ ಬ್ಲಾಕ್‍ಮೇಲ್  ಮಾಡಬೇಕು: ಡಿಕೆಶಿಗೆ ಬೊಮ್ಮಾಯಿ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಮೊನ್ನೆ ನಡೆದ ಗಲಭೆ ಸಂಬಂಧ ಯಾರನ್ನೋ ನಾವು ಏಕೆ ಬ್ಲಾಕ್‍ಮೇಲ್ ಮಾಡಬೇಕು ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಕೆಲ ಬಿಬಿಎಂಪಿ ಸದಸ್ಯರಿಗೆ ನೋಟಿಸ್ ನೀಡಿದ್ದೇವೆ. ಈ ಸಂಬಂಧ  ಪ್ರತಿಕ್ರಿಯೆ ನೀಡಿರುವ  ಶಿವಕುಮಾರ್ ಅವರಿಗೆ ಈ ನೆಲದ ಕಾನೂನು ಗೊತ್ತಿದೆ ಎಂದು ಭಾವಿಸಿದ್ದೇನೆ. ಗಲಭೆಯಲ್ಲಿ ಯಾರು ಯಾರು ಇದ್ದಾರೆ ಎಂಬುದನ್ನು ತಿಳಿದುಕೊಂಡು, ಅವರನ್ನು ನೇರವಾಗಿ ಬಂಧಿಸಲಿದ್ದೇವೆ.  ಹೀಗಾಗಿ ಕೆಲವರಿಗೆ ನೋಟಿಸ್ ಕೊಟ್ಟರೆ ತಪ್ಪೇನು?. ನಾವು ಕಾನೂನಾತ್ಮಕವಾಗಿ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದ್ದರೆ ಹೆದರಬೇಕು. ಇಲ್ಲದಿದ್ರೆ ಉತ್ತರ ಕೊಡಬೇಕು. ನಾವು ಕಾನೂನು ಪಾಲನೆ ಮಾಡಿದ್ದೇವೆ ಅಷ್ಟೇ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ಶಾಸಕ ಜಮೀರ್ ಅಹಮ್ಮದ್ ಖಾನ್ ಪರಿಹಾರ ಘೋಷಣೆ ಮಾಡಿದ್ದು ನೋಡಿದ್ರೆ ಅವರು ಯಾರ ಪರವಾಗಿ ಇದ್ದಾರೆ ಎಂಬುದು ಗೊತ್ತಾಗುತ್ತದೆ ಅಂತ ಹೇಳಿದ್ದಾರೆ. ಅಲ್ಲದೆ ಮುಂದಿನ ವಾರದಲ್ಲಿ ಫೇಸ್‍ಬುಕ್, ವಾಟ್ಸ್‌ ಆಪ್, ಇನ್‍ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರ ಕರೆದು ಸಭೆ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.

ಅಖಂಡ ಶ್ರೀನಿವಾಸಮೂರ್ತಿ ಒಬ್ಬ ಜವಾಬ್ದಾರಿಯುತ ಶಾಸಕರು. ಅವರು ಏನು ದೂರು ಕೊಡಬೇಕೋ ಅದನ್ನ ಕೊಟ್ಟಿದ್ದಾರೆ. ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಶಾಸಕ ಶ್ರೀನಿವಾಸ ಮೂರ್ತಿ ಭದ್ರತೆ ಕೇಳಿದ್ದಾರೆ. ಅವರಿಗೆ ಭದ್ರತೆ ಕೊಟ್ಟಿದ್ದೇವೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ತನಿಖೆ ನಡೆಯುತ್ತಿದೆ. ಸುಮಾರು 235 ಆರೋಪಿಗಳನ್ನು ಬಂಧಿಸಿದ್ದು, ಇವರ ಮೂಲಕ  ಇನ್ನೂ ಯಾರ‍್ಯಾರು ಅವರ ಹಿಂದೆ ಇದ್ದಾರೆ, ಏನೇನು ಷಡ್ಯಂತ್ರ ಇದೆ ಎಂಬುದನ್ನು ತನಿಖೆ ಮಾಡ್ತಿದ್ದೇವೆ. ಕೆಲವೇ ದಿನಗಳಲ್ಲಿ ಎಲ್ಲವೂ ಬಹಿರಂಗ ಆಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?