ನ್ಯೂಡೆಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ವಿದಾಯ ಘೋಷಿಸಿದ್ದಾರೆ.
ಶನಿವಾರ (ಆಗಸ್ಟ್ 15) ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಆ ಮೂಲಕ ಕಳೆದ ಹಲವು ತಿಂಗಳುಗಳಿಂದ ಎದ್ದಿದ ಊಹಾಪೋಹಗಳಿಗೆ ಇಂದು ಕ್ಯಾಪ್ಟನ್ ಕೂಲ್ ಪೂರ್ಣ ವಿರಾಮವಿಟ್ಟರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
“ನನ್ನ ವೃತ್ತಿ ಜೀವನದಲ್ಲಿ ನೀವು ತೋರಿದ ಪ್ರೀತಿ ಹಾಗೂ ಸಹಕಾರಕ್ಕೆ ಧನ್ಯವಾದಗಳು. 1929 ಗಂಟೆಗಳ ಬಳಿಕ ನಾನು ನಿವೃತ್ತಿ ಹೊಂದುತ್ತಿದ್ದೇನೆ.” ಎಂದು ಎರಡು ಬಾರಿ ವಿಶ್ವಕಪ್ ವಿಜೇತ ನಾಯಕ ಎಂ.ಎಸ್.ಧೋನಿ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದಾರೆ.
2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ.
ಎಂಎಸ್ ಧೋನಿ ಅವರು 350 ಏಕದಿನ ಪಂದ್ಯಗಳನ್ನಾಡಿದ್ದು ಪಂದ್ಯವೊಂದರಲ್ಲಿ 183 ರನ್ ಬಾರಿದ್ದಾರೆ. ಇನ್ನು ಮಹತ್ವದ ಐಸಿಸಿ ಟೂರ್ನಿಗಳಾದ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ ಮತ್ತು ಚಾಂಪಿಯನ್ ಟ್ರೋಫಿ ಗೆಲ್ಲಿಸಿಕೊಟ್ಟ ಕೀರ್ತಿ ಧೋನಿಯವರದ್ದು.
2017ರಲ್ಲಿ ಧೋನಿ ತಮ್ಮ ನಾಯಕ ಸ್ಥಾನಕ್ಕೆ ವಿದಾಯ ಘೋಷಿಸಿದ್ದರು. ಬಳಿಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಟೀಂ ಇಂಡಿಯಾ ತಂಡದ ನಾಯಕತ್ವ ವಹಿಸಿಕೊಂಡಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail