ಬೆಂಗಳೂರು: ನಗರದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 35 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಇದುವರೆಗೆ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇದೇ ಆಗಸ್ಟ್ 11ರಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಸರಲ್ಲಿ ಗಲಭೆ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಿಗೊಂಡಿದ್ದು, ಈ ವರೆಗೂ 340 ಮಂದಿಯನ್ನು ಬಂಧಿಸಿದ್ದಾರೆ. ನಿನ್ನೆ ಒಂದೇ ದಿನ 85 ಮಂದಿಯನ್ನು ಬಂಧಿಸಿದ್ದು, ಇಂದು ಮತ್ತೆ 35 ಮಂದಿಯನ್ನು ಬಂಧಿಸಿದ್ದಾರೆ.
ಇನ್ನು ಬಂಧಿತರು ನೀಡಿರುವ ಮಾಹಿತಿ ಮೇರೆಗೆ ಮತ್ತಷ್ಟು ಮಂದಿಯನ್ನು ಪೊಲೀಸರು ಬಂಧಿಸಲಿದ್ದಾರೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಪೊಲೀಸರು 45 ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವವರಿಗಾಗಿ ಶೋಧ ನಡೆಸುತ್ತಿದ್ದು, ಬಂಧಿತರ ಸಂಖ್ಯೆ 1 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail