ಮಂಗಳೂರು: ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ-ಕೇರಳ ನಡುವಿನ ಗಡಿಯನ್ನು ಅಂತಾರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಕ್ತಗೊಳಿಸಿದೆ.
ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ತೆರೆದಿದ್ದು, ಪ್ರತಿದಿನ ಸಂಚರಿಸುವ ಸಾರ್ವಜನಿಕರು ತಿಂಗಳ ಪಾಸ್ ಪಡೆಯಬೇಕು ಎಂದು ಜಿಲ್ಲಾಡಳಿತ ಹೇಳಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಎರಡೂ ರಾಜ್ಯಗಳ ನಡುವೆ ಪ್ರತಿದಿನ ಸಂಚಾರ ನಡೆಸುವವರು ಸ್ಥಳೀಯ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿಯಿಂದ ತಿಂಗಳ ಪಾಸನ್ನು ಪಡೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಆದೇಶ ಮಾಡಿದ್ದಾರೆ.
ಪ್ರತಿದಿನ ಗಡಿಯಲ್ಲಿನ ಚೆಕ್‌ಪೋಸ್ಟ್‌ನಲ್ಲಿ ಪ್ರಯಾಣಿಕರು ವಿವರಗಳನ್ನು ದಾಖಲು ಮಾಡಬೇಕು. ಥರ್ಮಲ್ ಸ್ಕ್ರೀನಿಂಗ್‌ಗೆ ಒಳಗಾಗಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕಾಸರಗೋಡು ಜಿಲ್ಲಾಡಳಿತ ಅಂತಾರಾಜ್ಯಗಳ ನಡುವೆ ಸಂಚಾರ ನಡೆಸುವವರಿಗೆ 21 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದೆ.
ಕೇರಳದಿಂದ ದಕ್ಷಿಣ ಕನ್ನಡಕ್ಕೆ ಆಗಮಿಸಿ ವಾಸ್ತವ್ಯ ಹೂಡಲು ಬಯಸುವವರು ಸೇವಾ ಸಿಂಧು ಮೂಲಕ ಪಾಸ್ ಪಡೆಯಬೇಕು. ತಪಪ್ಪಾಡಿ ಮತ್ತು ಜಲಸೂರು ಚೆಕ್ ಪೋಸ್ಟ್ ಮೂಲಕ ಸಂಚರಿಸಬೇಕು ಎಂದು ನಿರ್ದೇಶನ ನೀಡಿರುವುದಾಗಿ ಜಿಲ್ಲಾಡಳಿತ ವಿವರ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail