CrimeNEWSನಮ್ಮರಾಜ್ಯರಾಜಕೀಯ

ಡಿ.ಜೆ. ಹಳ್ಳಿ ಗಲಭೆಕೋರರಿಂದಲೇ ನಷ್ಟ ವಸೂಲಿ: ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಗಲಭೆ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದು, ಸಾರ್ವಜನಿಕ ಆಸ್ತಿಪಾಸಿಗಳನ್ನು ನಷ್ಟಮಾಡಿರುವವರಿಂದ ಎಲ್ಲಾ ನಷ್ಟವನ್ನು ಭರಿಸಬೇಕು ಎಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ನಡೆದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳು

  1. ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಉಚ್ಚನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಈಗಾಗಲೇ ನೀಡಲಾಗಿರುವ ದೇಶದ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ‘ಕ್ಲೇಮ್ ಕಮಿಷನರ್’ ನೇಮಿಸಲು ಕೋರುವ ಬಗ್ಗೆ ತೀರ್ಮಾನಿಸಲಾಯಿತು.
  2. ಈ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಉಪಸ್ಥಿತರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಅಲ್ಲದೇ ಈ ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆಯನ್ನು ಸಹ ಅಳವಡಿಸಿರುವುದರ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
  3. ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
  4. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸುವ ಬಗ್ಗೆ ನಿರ್ಣಯ.
  5. ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡುಬಂದಲ್ಲಿ ಗೂಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳುವುದು ಸೇರಿ ಆರೋಪಿಗಳ ವಿರುದ್ಧ ಹಳೇ ಕೇಸುಗಳು ಇದ್ದರೆ ಸೂಕ್ತ ಕ್ರಮ ಜರುಗಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಯಿತು.
  6. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್, ಗುಪ್ತವಾರ್ತೆ ವಿಭಾಗದ ಎಡಿಜಿಪಿ ಬಿ. ದಯಾನಂದ, ಪೊಲೀಸ್‌ ಕಮಿಷನರ್‌, ಕಮಲ್‍ಪಂತ್, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಮರ ಕುಮಾರ್ ಪಾಂಡೆ ಇದ್ದರು.

1 Comment

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?