Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶರಾಜಕೀಯ

ಬಿಜೆಪಿ-ಎಎಪಿ ರಾಜಕೀಯ ಮೇಲಾಟ: ಸಿಎಎ ವಿರೋಧಿಸಿ ಪ್ರತಿಭಟಿಸಿದ್ದ 50ಕ್ಕೂ ಹೆಚ್ಚು ಮಂದಿ ಬಿಜೆಪಿ ಸೇರ್ಪಡೆ

ಇದು ರಾಜಕೀಯ ದೊಂಬರಾಟ ಎಂದು ಎಎಪಿ ಮುಖಂಡರ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನ್ಯೂಡೆಲ್ಲಿಯ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆ ನಡೆಸಿದ 50 ಕ್ಕೂ ಹೆಚ್ಚು ಜನರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರತಿಭಟನೆಗಳನ್ನು ಬಿಜೆಪಿ  ರಾಜಕೀಯ ಲಾಭಕ್ಕಾಗಿ ಉಪಯೋಗಿಸಿಕೊಂಡಿದೆ ಎಂದು ನ್ಯೂಡೆಲ್ಲಿ ಆಡಳಿತಾರೂಢ  ಆಮ್ ಆದ್ಮಿ ಪಕ್ಷದ ಆರೋಪಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಾಯುವ್ಯ ನ್ಯೂಡೆಲ್ಲಿ ಸೇರಿ ದೇಶಾದ್ಯಂತ ಸಿಎಎ ವಿರೋಧಿ ಪ್ರತಿಭಟನೆಗಳು ನಡೆದವು. ಕೊರೊನಾ ಸೋಂಕಿನ ಭೀತಿಯೂ ಎದುರಾಗಿತ್ತು. ಈಗ ಅದರಿಂದ ಜನರು ನಿಧಾನವಾಗಿ ಹೊರಬರುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಸಿಎಎ ವಿರೋಧಿಸಿ ಬಿಜೆಪಿ ವಿರುದ್ಧ  ನಡೆದ ಪ್ರತಿಭಟನೆಯ ಮುದಾಳತ್ವ ವಹಿಸಿದ್ದ ಅನೇಕರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರಲ್ಲಿ ಸಾಮಾಜಿಕ ಕಾರ್ಯಕರ್ತ ಶಹಜಾದ್ ಅಲಿ, ಸ್ತ್ರೀರೋಗತಜ್ಞ ಡಾ. ಮೆಹ್ರೀನ್ ಮತ್ತು ಮಾಜಿ ಎಎಪಿ ಕಾರ್ಯಕರ್ತ ತಬಸ್ಸುಮ್ ಹುಸೇನ್ ಪ್ರಮುಖರು.

ನ್ಯೂಡೆಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಲಾಭ ಪಡೆಯಲು ಬಿಜೆಪಿ ನ್ಯೂಡೆಲ್ಲಿ ಪೊಲೀಸರೊಂದಿಗೆ ಸಂಚು ಹೂಡಿದೆ ಮತ್ತು ಶಾಹೀನ್ ಬಾಗ್‌ನಲ್ಲಿ ಪ್ರದರ್ಶನ ಯೋಜಿಸಿದೆ ಎಂದು ಎಎಪಿ ದೂರಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

“ಶಾಹೀನ್ ಬಾಗ್ ಪ್ರತಿಭಟನೆ ಬಿಜೆಪಿಯ ಮುಖ್ಯ ಚುನಾವಣಾ ವಿಷಯವಾಗಿತ್ತು . ಶಹೀನ್ ಬಾಗ್ ಪ್ರತಿಭಟನೆಯ ಸಂಘಟಕರು ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಪಕ್ಷದ ಒಳಸಂಚು ಈಗ ಬಯಲಾಗಿದೆ. ಅಷ್ಟೇ ಅಲ್ಲ ಚುನಾವಣೆಯಲ್ಲಿ ಗೆಲ್ಲಲು ಈ ರೀತಿ  ಡ್ರಾಮ ಸೃಷ್ಟಿದೆ ಎಂದು ಎಎಪಿಯ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರುದ್ಧ ನಡೆದ ಪ್ರತಿಭಟಯಲ್ಲಿ ಹಿಂಸಾಚಾರ ಈಶಾನ್ಯ ದೆಹಲಿಯನ್ನು ಆವರಿಸಿತು, ಅದರಲ್ಲಿ 53 ಜನರು, ಮೃತಪಟ್ಟಿದ್ದರು. ಅವರಲ್ಲಿ ಹೆಚ್ಚಿನವರು ಮುಸ್ಲಿಮರೆ ಆಗಿದ್ದಾರೆ.  ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮತ್ತು ವಿರುದ್ಧವಾಗಿ ಪ್ರತಿಭಟನಾಕಾರರ ನಡುವೆ ಘರ್ಷಣೆಯಾಗಿ ಹಿಂಸಾಚಾರ ಪ್ರಾರಂಭವಾಗಿತ್ತು. ಇಂದು ಅಂತಹ ಪ್ರತಿಭಟನೆಯನ್ನು ಮಾಡಿದವರೆ ಬಿಜೆಪಿಗೆ ಜೈ ಎನ್ನುತ್ತಿದ್ದಾರೆ. ಇದನ್ನು ನೋಡಿದರೆ, ಬಿಜೆಪಿಗರ ಒಳಸಂಚು ಕಾಣಿಸದೆ ಇರಲು ಸಾಧ್ಯವೆ ಎಂದು ಕಿಡಿಕಾರಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ