CRIMENEWSನಮ್ಮರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಮನೆ ಊಟ- ಕೋರ್ಟ್‌ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ ಕೋರ್ಟ್‌ ಅವಕಾಶ ನೀಡಿದೆ.

ಇಂದು ಸೋಮವಾರ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿದ ವೇಳೆ ಆರೋಪಿಗಳ ಆರೋಗ್ಯದ ಹಿತದೃಷ್ಟಿಯಿಂದ ವಾರಕ್ಕೊಮ್ಮೆ ಮನೆ ಊಟ ನೀಡುವಂತೆ ಆದೇಶಿಸಿದೆ. ಪವಿತ್ರಾ ಗೌಡ ಜತೆಗೆ ನಾಗರಾಜ್ ಮತ್ತು ಲಕ್ಷ್ಮಣ್ ಎಂಬ ಇತರ ಆರೋಪಿಗಳಿಗೂ ಇದೇ ಸೌಲಭ್ಯ ಲಭ್ಯವಾಗಲಿದೆ.

ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾಗೌಡ ಜೈಲು ಊಟದಿಂದ ಚರ್ಮರೋಗ (ಸ್ಕಿನ್ ಅಲರ್ಜಿ), ಫುಡ್ ಪಾಯ್ಸನಿಂಗ್ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಇದಕ್ಕೆ ಸಂಬಂಧಿಸಿ ಮೊದಲು ದಿನಕ್ಕೊಂದು ಬಾರಿ ಮನೆ ಊಟ ನೀಡಲು ಕೋರ್ಟ್ ಅನುಮತಿ ನೀಡಿತ್ತು. ಆದರೆ, ಜೈಲು ಅಧಿಕಾರಿಗಳು ಇದನ್ನು ಪ್ರಶ್ನಿಸಿ ಇದರಿಂದ ಇತರ ಸಾವಿರಾರು ಕೈದಿಗಳು ಇದೇ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ವಾದಿಸಿದ್ದರು.

ಕೋರ್ಟ್ ಈ ವಾದಗಳನ್ನು ಪರಿಗಣಿಸಿ ಆದೇಶವನ್ನು ಪರಿಷ್ಕರಿಸಿದೆ. ಈಗ ವಾರಕ್ಕೊಮ್ಮೆ ಮಾತ್ರ ಮನೆ ಊಟ ನೀಡುವಂತೆ ನಿರ್ದೇಶಿಸಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾದರೆ ವೈದ್ಯರ ಸಲಹೆಯಂತೆ ಹೆಚ್ಚುವರಿ ಅವಕಾಶ ನೀಡಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದ. ಅಲ್ಲದೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ರೇಣುಕಾಸ್ಮಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ ನಟ ದರ್ಶನ್ ಎ2 ಆರೋಪಿ ಈ ಪ್ರಕರಣದ ಟ್ರಯಲ್ ಈಗಾಗಲೇ ಆರಂಭವಾಗಿದ್ದು ಸಾಕ್ಷಿಗಳ ವಿಚಾರಣೆ ಮುಂದುವರಿದಿದೆ.

ಆದರೆ, ಇಂದು ನಡೆದ ವಿಚಾರಣೆಯಲ್ಲಿ ಟ್ರಯಲ್ ಅನ್ನು ನಾಳೆ (ಜನವರಿ 13)ಗೆ ಮುಂದೂಡಲಾಗಿದೆ ಎಲ್ಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.

Megha
the authorMegha

Leave a Reply

error: Content is protected !!
Latest news
KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ