CRIMENEWSನಮ್ಮಜಿಲ್ಲೆ

ಜಮೀನು ಒತ್ತುವರಿ ಗಲಾಟೆ- ಒಬ್ಬನ ಕೊಲೆಯಲ್ಲಿ ಅಂತ್ಯ: ಮೂವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಪಾಂಡವಪುರ: ಜಮೀನು ವಿವಾದದಲ್ಲಿ ನಡೆದ ದಾಯಾದಿಗಳ ನಡುವಿನ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲೂಕಿನ ಚಿಕ್ಕಾಡ ಗ್ರಾಮದಲ್ಲಿ ನಡೆದಿದೆ

ಗ್ರಾಮದ ನಿವಾಸಿ ಕೃಷ್ಟೇಗೌಡ (62) ಕೊಲೆಯಾದ ರೈತ. ಇದೇ ಗ್ರಾಮದ ರಾಜು ಅಲಿಯಾಸ್ ಅರುಣ, ಈತನ ತಮ್ಮ ಕಿರಣ ಹಾಗೂ ತಾಯಿ ಸುನೀತಾ ಹತ್ಯೆ ಆರೋಪಿಗಳಾಗಿದ್ದು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ತಾಲೂಕಿನ ಚಿಕ್ಕಾಡೆ ಗ್ರಾಮದ ಹೊರವಲಯದಲ್ಲಿ ಕೃಷ್ಣೇಗೌಡ ಹಾಗೂ ರಾಜು ಇಬ್ಬರಿಗೂ ಸೇರಿದ ಜಮೀನಿದ್ದು, ಜಮೀನು ಒತ್ತುವರಿ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳ ನಯುತ್ತಿತ್ತು. ಬಳಿಕ ರಾಜಿ, ಸಂಧಾನ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಆದರೂ ಇದೇ ವಿಚಾರವಾಗಿ ಸೋಮವಾರ ಕೂಡ ಇಬ್ಬರ ನಡುವೆ ಕಲಹ ಏರ್ಪಟ್ಟಿದ್ದು, ಈ ವೇಳೆ ಆರೋಪಿಗಳು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತಲೆ ಮತ್ತು ಕಿವಿ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಕೃಷ್ಣೇಗೌಡ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಈ. ತಿಮ್ಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಂಡವಪುರ ಪೊಲೀಸ್ ಇನ್ ಸ್ಪೆಕ್ಟರ್ ಶರತ್‌ಕುಮಾರ್ ಮಹಜರು ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಮೃತರ ಪುತ್ರ ಶಶಿಕುಮಾರ್ ನೀಡಿದ ದೂರಿನ ಮೇರೆಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!