ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದ್ದು, ಹೆಚ್ಚಾಗಿ ಗುಂಪುಗೂಡದೆ ಹಬ್ಬ ಆಚರಿಸಬಹುದು ಎಂದು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.
ಜತೆಗೆ ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕವಾಗಿ ಬಿಎಸ್ವೈ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಿದೆ.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ pic.twitter.com/lf8U1sV0Sw
— CM of Karnataka (@CMofKarnataka) August 18, 2020