CRIMENEWSನಮ್ಮಜಿಲ್ಲೆ

KSRTC ಬಸ್‌ – ಕಾರು ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ತೀರ್ಥಹಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10 ಗಂಟೆಯಲ್ಲಿ ನಡೆದಿದೆ.

ತೀರ್ಥಹಳ್ಳಿ ಕಡೆಯಿಂದ ರಾಯಚೂರಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದಾವಣಗೆರೆ ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿ ಕಡೆ ಹೊರಟಿದ್ದ ಕಾರಿನ ನಡುವೆ ಈ ಅವಘಡ ಸಂಭವಿಸಿದೆ.

ಕಾರು ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಫಾತಿಮಾ (70 ವರ್ಷ), ರಿಹಾನ್ (15 ವರ್ಷ), ರಾಹಿಲ್ (9 ವರ್ಷ) ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಹಾಗೂ ಚಾಲಕರನ್ನು ಪಟ್ಟಣದ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ.

ಕಾರಿನಲ್ಲಿದ್ದವರು ಶೃಂಗೇರಿ ಮೂಲದ ಮೆಣಸೆಯವರಾಗಿದ್ದು, ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಮದುವೆಯಲ್ಲಿ ಭಾಗಿಯಾಗಿ ಶೃಂಗೇರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.

ವಿಜಯ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!