ಬೆಂಗಳೂರು: ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಪಿಎಫ್ಐ ನಿಷೇಧ ಕುರಿತು ಇಂದು ಸಚಿವ ಸಂಪುಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಇಂದು 11.30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಕೆರೆದಿದ್ದು ಇಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಗಲಭೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆಯೂ ಚರ್ಚೆ ನಡೆಯಲಿದೆ. ಅಲ್ಲದೇ, ಗಲಭೆಯಲ್ಲಿ ಎಸ್‌ಡಿಪಿಐ ಸಂಘಟನೆ ನಿಷೇಧ ಮತ್ತು ತನಿಖೆ ಸೇರಿದಂತೆ ವಿವಿಧ ವಿಚಾರಗಳು ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಲಿದೆ , ಎಂದು ಹೇಳಲಾಗಿದೆ.