ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 105ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಕಂಡ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಅರಸು ಅವರ 105ನೇ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ. ಆದರ್ಶ ಆಡಳಿತಗಾರರಾಗಿದ್ದ ಅರಸು ಅವರು ಜಾರಿಗೆ ತಂದ ಅನೇಕ ಸುಧಾರಣಾ ಕ್ರಮಗಳನ್ನು ನಾಡು ಸದಾ ಸ್ಮರಿಸುತ್ತದೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ವಿ. ಸೋಮಣ್ಣ ಮತ್ತಿತರರು ಇದ್ದರು.